ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸ್ವಚ್ಛತಾ ಹಿ ಸೇವಾ ಅಭಿಯಾನದ ಅಂಗವಾಗಿ, ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಮೈಸೂರು ಕೊಕ್ಕರಹಳ್ಳಿಕೆರೆಯಲ್ಲಿ ಆಯೋಜಿಸಲಾಗಿದ್ದ ವಾಕ್ಥಾನ್ ಯಶಸ್ವಿಯಾಗಿ ನಡೆಯಿತು.
ಸ್ವಚ್ಛತೆ, ಆರೋಗ್ಯ ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸುವ ಮಹತ್ವದ ಉದ್ದೇಶದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆಯ ಮೈಸೂರು ವಿಭಾಗದಲ್ಲಿ ನಡೆದ ಈ ವಾಕ್ಥಾನ್ ಅತ್ಯಂತ ಯಶಸ್ವಿಯಾಯಿತು.
ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಮ್ಮಾಸ್ ಹಮೀದ್ ಅವರುಗಳ ನೇತೃತ್ವದಲ್ಲಿ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದರು.
ವಾಕ್ಥಾನ್ ಮೂಲಕ ರೈಲ್ವೆಯು ತನ್ನ ಪರಿಧಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬದ್ಧತೆಯನ್ನು ಮರುಸ್ಥಾಪಿಸಿತು. ಜೊತೆಗೆ, ಸಮಾಜವು ಸಕ್ರಿಯವಾಗಿ ಸ್ವಚ್ಛತಾ ಚಳವಳಿಯಲ್ಲಿ ಪಾಲ್ಗೊಳ್ಳಬೇಕೆಂಬ ಸಂದೇಶವನ್ನೂ ಹರಡಲಾಯಿತು.
ಈ ಸಂದರ್ಭದಲ್ಲಿ ಸ್ವಚ್ಛತೆಯನ್ನು ಜೀವನಶೈಲಿಯಾಗಿ ಅಳವಡಿಸಿಕೊಳ್ಳುವ ಮಹತ್ವವನ್ನು ಹೇಳಲಾಯಿತು.
ಸಿಬ್ಬಂದಿ ಹಾಗೂ ಸಾರ್ವಜನಿಕರು ಶಾಶ್ವತ ಸ್ವಚ್ಛತಾ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕೆಂದು ಪ್ರೋತ್ಸಾಹಿಸಲಾಯಿತು. ಜೊತೆಗೆ ನಡೆಯುವುದು ಆರೋಗ್ಯಕರ ಹಾಗೂ ಜವಾಬ್ದಾರಿಯುತ ಸಮಾಜವನ್ನು ನಿರ್ಮಿಸಲು ಸಹಕಾರಿ ಎಂಬ ಸಂದೇಶವನ್ನೂ ಸಹ ನೀಡಲಾಯಿತು.
ವಾಕ್ಥಾನ್’ನಲ್ಲಿ ಉತ್ಸಾಹಭರಿತವಾಗಿ ಪಾಲ್ಗೊಂಡ ಎಲ್ಲರೂ ಸ್ವಚ್ಛತೆ ಎಲ್ಲರ ಹೊಣೆಗಾರಿಕೆ ಎಂಬ ಸಂದೇಶವನ್ನು ಸಾರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post