ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ದಿನೇ ದಿನೇ ಕೊರೋನಾ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಬೇಡಿಕೆಯೂ ಸಹ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಇಂದು ನಗರಕ್ಕೆ ಒಂದು ಟ್ಯಾಂಕರ್ ಆಕ್ಸಿಜನ್ ತರಿಸಿಕೊಳ್ಳಲಾಗಿದೆ.
ಬಳ್ಳಾರಿಯಿಂದ ನಗರಕ್ಕೆ ಒಂದು ಟ್ಯಾಂಕರ್ ಆಕ್ಸಿಜನ್ ತರಿಸಿಕೊಳ್ಳಲಾಗಿದೆ. ಬಳ್ಳಾರಿಯಿಂದ ಚಿತ್ರದುರ್ಗ, ಹೊಳೆಹೊನ್ನೂರು ಮಾರ್ಗವಾಗಿ ಆಗಮಿಸಿದ ಟ್ಯಾಂಕರ್ ನಗರ ವ್ಯಾಪ್ತಿಯಿಂದ ಪೊಲೀಸ್ ಎಸ್ಕಾರ್ಟ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿದೆ.
ಇಂದು ಆಗಮಿಸಿದ ಒಂದು ಟ್ಯಾಂಕರ್ ಆಕ್ಸಿಜನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿರುವ ಪ್ಲಾಂಟ್’ಗೆ ತುಂಬಿಸಲಾಗಿದ್ದು, ಇದು ಒಂದು ದಿನಕ್ಕೆ ಖಾಲಿಯಾಗಲಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post