ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ಮೆಕ್ಕೆ ಜೋಳ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗೆ ಆಹುತಿಯಾಗಿ, ಭಸ್ಮವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್’ನಲ್ಲಿ ಜಾವಗಲ್’ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















