ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಅಪಾರ್ಟ್’ಮೆಂಟ್’ನ 4ನೇ ಮಹಡಿಯಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದ ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಸದಾಶಿವ ನಗರದಲ್ಲಿ ನಡೆದಿದೆ.
ಮೃತ ಯುವತಿಯನ್ನು ಸದಾಶಿವ ನಗರದ ನಿವಾಸಿ ಓಶಾನಾ ರೊನಾಲ್ಡ್ (21) ಎಂದು ಗುರುತಿಸಲಾಗಿದೆ.
ಓಶಾನೋ ತಮ್ಮ ಸಾಕು ನಾಯಿಯನ್ನು ಟೆರೇಸ್ ಮೇಲೆ ವಾಕಿಂಗ್’ಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ 4ನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ.
ತತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಆಕೆ ಮೃತಪಟ್ಟಿದ್ದಾರೆ.
ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















