ನವದೆಹಲಿ: ಲೆ ಗೌ ಕಚೇರಿಯಲ್ಲಿ ನಡೆಸಲಾಗುತ್ತಿರುವ ಉಪವಾಸ ಸತ್ಯಾಗ್ರಹದಿಂದಾಗಿ ಅಸ್ವಸ್ತಗೊಂಡಿರುವ ನವದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಇಂದು ತೀವ್ರ ಅಸ್ವಸ್ಥಗೊಂಡ ಪರಿಣಾಮ ಸಿಸೋಡಿಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.
Manish Sisodia being shifted to hospital https://t.co/3LdQe3jG3z
— Arvind Kejriwal (@ArvindKejriwal) June 18, 2018
ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಎಎಪಿ ಮುಖಂಡ ಅಮಿತ್ ಮಿಶ್ರಾ, ಸಿಸೋಡಿಯಾ ಅವರ ಕೆಟೋನ್ ಪ್ರಮಾಣ ಇಂದು 7.4ಕ್ಕೆ ತಲುಪಿದ್ದು, ನಿನ್ನೆ 6.4ರಷ್ಟಿತ್ತು. ಇವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದರು.
ಮುಷ್ಕರದಲ್ಲಿ ಪಾಲ್ಗೊಂಡಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಅಸ್ವಸ್ತಗೊಂಡಿದ್ದ ಹಿನ್ನೆಲೆಯಲ್ಲಿ ನಿನ್ನೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
Discussion about this post