No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ನೇಮಕಕ್ಕೆ ಎಎಪಿ ಖಂಡನೆ

kalpa News by kalpa News
October 19, 2020
in Small Bytes, ಶಿವಮೊಗ್ಗ
0
ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ಅವರನ್ನು ನೇಮಕ ಮಾಡಿರುವ ಕ್ರಮವನ್ನು ಅಮ್ ಆದ್ಮಿ ಪಕ್ಷ ಖಂಡಿಸಿದೆ.

ಈ ಕುರಿತಂತೆ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್, ಭ್ರಷ್ಟಾಚಾರದ ಕಡತಗಳು, ಅಕ್ರಮ ಟೆಂಡರ್‌ಗಳು ಹಾಗೂ ಇನ್ನಿತರೆ ಅವ್ಯವಹಾರಗಳ ಕಡತಗಳನ್ನು ಸುಟ್ಟು ಹಾಕಲು ಎನ್.ಆರ್. ಸಂತೋಷ್ ಎಂಬ ಖಾಸಗಿ ವ್ಯಕ್ತಿಯನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ತಂಗಿಯ ಮೊಮ್ಮಗನಾದ ಈ ಕುಟುಂಬದ ವ್ಯಕ್ತಿಯನ್ನು ರಾಜ್ಯ ಸರ್ಕಾರದ ಶಾಸನಾತ್ಮಕ ಆಡಳಿತ ನಿರ್ವಹಣೆಯಲ್ಲಿ ಸೇರಿಸಿಕೊಂಡು ಕ್ಯಾಬಿನೆಟ್ ದರ್ಜೆಯ ಸ್ಥಾನಮಾನಗಳನ್ನು, ಕಚೇರಿ ನಿರ್ವಹಣೆಗೆ ಸಿಬ್ಬಂದಿಗಳನ್ನು ನೀಡಿ ಸರ್ಕಾರದ ಎಲ್ಲಾ ಸವಲತ್ತುಗಳನ್ನು ನೀಡಿರುವ ಉದ್ದೇಶ ನಿಧಾನಕ್ಕೆ ಬಯಲಾಗುತ್ತಿದೆ. ಎಲ್ಲಾ ಇಲಾಖೆಯಲ್ಲೂ ಕೈಯಾಡಿಸುತ್ತಿರುವ ಸಂತೋಷ್ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿಯ ನಾಯಕರುಗಳು, ಯಡಿಯೂರಪ್ಪ ಅವರು, ಹಾಗೂ ವಿಜಯೇಂದ್ರ ಸೇರಿದಂತೆ ಇತರೇ ಸಹೋದ್ಯೋಗಿಗಳು ಎಲ್ಲಾ ಇಲಾಖೆಗಳಲ್ಲಿ ನಡೆಸಿರುವ ಕೋಟ್ಯಂತರ ರೂಪಾಯಿ ಅಕ್ರಮಗಳ ಕಡತಗಳನ್ನು ಹುಡುಕಿ ಸುಟ್ಟು ಹಾಕಲು ಎಂದು ಆರೋಪಿಸಿದ್ದಾರೆ.

ಈ ನೇಮಕಾತಿ ಸಂವಿಧಾನ ವಿರೋಧಿ ಹಾಗೂ ಕಾನೂನು ವಿರೋಧಿಯಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಪರಮಾಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನಪಕ್ಷಪಾತ ನಡೆಸುತ್ತಿರುವುದು ಸ್ಪಷ್ಟವಾಗಿದೆ ಮುಖ್ಯಮಂತ್ರಿಗಳ ಈ ನಡೆಯನ್ನು ತೀವ್ರವಾಗಿ ಪಕ್ಷವು ಖಂಡಿಸುತ್ತದೆ. ಈಗಾಗಲೇ ಮುಖ್ಯಮಂತ್ರಿಗಳ ಮಗ ವಿಜಯೇಂದ್ರ ವಿರುದ್ಧವೂ ಅನೇಕ ಹಗರಣಗಳು ಕೇಳಿ ಬಂದು ವಿಧಾನಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಿದೆ. ಈ ಮೂಲಕ ಮುಖ್ಯಮಂತ್ರಿಗಳು ಅಕ್ರಮ ಕೂಟ ರಚನೆ ಮಾಡಿಕೊಂಡಿದ್ದಾರೆ ಎಂದು ದೂರಿದರು.

ಈ ವ್ಯಕ್ತಿಯ ವಿರುದ್ಧ ಈಗಾಗಲೇ ಆಪರೇಷನ್ ಕಮಲದಂತಹ ಅಸಂವಿಧಾನಿಕ ಪ್ರಜಾಪ್ರಭುತ್ವ ವಿರೋಧಿ ಕುಕೃತ್ಯಗಳಲ್ಲಿ ಭಾಗಿಯಾಗಿರುವ ನೇರ ಸಾಕ್ಷಿಗಳು ರಾಜ್ಯದ ಜನತೆ ಮುಂದಿವೆ. ಈ ವ್ಯಕ್ತಿಯ ವಿರುದ್ಧ ಈಗಾಗಲೇ ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಮೊಕದ್ದಮೆಗಳು ಸಹ ದಾಖಲಾಗಿರುವ ವರದಿಗಳು ಮಾಧ್ಯಮಗಳಲ್ಲಿ ಈಗಾಗಲೇ ಬಿತ್ತರವಾಗಿದೆ. ಈ ವ್ಯಕ್ತಿಯ ವಿರುದ್ಧ ಬಿಜೆಪಿಯ ಪ್ರಮುಖ ನಾಯಕ ಈಶ್ವರಪ್ಪನವರು ಸಹ ಈ ಹಿಂದೆ ಗುರುತರವಾದ ಆರೋಪವನ್ನು ಮಾಡಿದ್ದರು. ರಾಜ್ಯ ಸರ್ಕಾರದಲ್ಲಿನ ಕಡತ ಪರಿಶೀಲನೆಯಂತಹ ಮಹತ್ವದ ಆಡಳಿತಾತ್ಮಕ ನಿರ್ವಹಣೆಯಲ್ಲಿ ನೇರವಾಗಿ ಕೈಹಾಕಿ ಸಾವಿರಾರು ಕೋಟಿ ರೂಗಳ ಭ್ರಷ್ಟಾಚಾರ ಎಸಗಲು ನೇಮಕಾತಿ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

ರಾಜಕೀಯ ಎಂದರೆ ಹಣ ಮಾಡುವ ದಂಧೆಯನ್ನಾಗಿ ಮಾಡಿಕೊಂಡಿರುವ ಮುಖ್ಯಮಂತ್ರಿಗಳು ಅಸಂವಿಧಾನಿಕವಾಗಿ ಈ ಹುದ್ದೆಯನ್ನು ತಮ್ಮ ಆಪ್ತನಿಗೆ ಹಂಚಿ, ಈ ಮೂಲಕ ವ್ಯವಹಾರ ಕುದುರಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಕುರ್ಚಿ ಕೂಡ ಅಲುಗಾಡುತ್ತಾ ಇರುವುದರಿಂದ, ಈ ಸಮಯದ ಒಳಗೆ ತಮ್ಮ ಆಪ್ತರಿಗೆ ಗಂಟು ಮಾಡಿಟ್ಟು ಕೊಳ್ಳಲು ಆಸ್ಪದ ನೀಡಿದ್ದಾರೆ. ಕಷ್ಟ ಕಾಲದಲ್ಲಿ ಜೊತೆಯಲ್ಲಿ ಇದ್ದವರಿಗೆಲ್ಲ ಪಟ್ಟ ಕಟ್ಟಲು ಇದೇನು ರಾಜ ಪ್ರಭುತ್ವವೇ? ಖಾಸಗಿ ವ್ಯಕ್ತಿಯೊಬ್ಬನಿಗೆ ಪ್ರಮುಖ ಹುದ್ದೆ ನೀಡಲು ನಾಚಿಕೆ ಆಗುವುದಿಲ್ಲವೇ ಮುಖ್ಯಮಂತ್ರಿಗಳೇ. ಹಿರಿಯರಾದ ನೀವು ಖುರ್ಚಿಯ ಆಸೆಗಾಗಿ ಸ್ವಾಭಿಮಾನ ಮರೆತು ಕಂಡಕಂಡವರಿಗೆಲ್ಲ ಅಧಿಕಾರ ಹಂಚುವ ಪರಿಪಾಠವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ.ಈ ಕೂಡಲೇ ಈ ವ್ಯಕ್ತಿಯನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಬೇಕು ಹಾಗೂ ಈ ವಿಚಾರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AAPChief MinisterKannada News WebsiteLatest News KannadaPolitical NewsShimogaShivamoggaShivamogga Newsಅಮ್ ಆದ್ಮಿ ಪಕ್ಷಮುಖ್ಯಮಂತ್ರಿಶಿವಮೊಗ್ಗ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಕೆಟಿಂಗ್, ಕಮ್ಯುನಿಕೇಷನ್, ಅಡ್ವರ್ಟ್ಟೈಸಿಂಗ್ ಬೋರ್ಡ್ ನಿರ್ದೇಶಕರಾಗಿ ತೀರ್ಥೇಶ್ ನೇಮಕ

Next Post

ವ್ಯಾಪಾರದ ಸಂದರ್ಭದಲ್ಲಿ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಿ: ವಿಜಯ್ ಕುಮಾರ್ ದಿನಕರನ್

kalpa News

kalpa News

Next Post
ವ್ಯಾಪಾರದ ಸಂದರ್ಭದಲ್ಲಿ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಿ: ವಿಜಯ್ ಕುಮಾರ್ ದಿನಕರನ್

ವ್ಯಾಪಾರದ ಸಂದರ್ಭದಲ್ಲಿ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಿ: ವಿಜಯ್ ಕುಮಾರ್ ದಿನಕರನ್

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL