ಕಲ್ಪ ಮೀಡಿಯಾ ಹೌಸ್ | ರಾಯಚೂರು |
ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನವೊಂದು ಪಲ್ಟಿಯಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ದುರ್ಮರಣವನ್ನಪ್ಪಿರುವ #Mantralaya Vidyapeeta Vehilcle Accident ದಾರುಣ ಘಟನೆ ನಡೆದಿದೆ.
ಸಿಂಧನೂರು ನಗರದ ಹೊರವಲಯದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕ ಮೃತಪಟ್ಟಿದ್ದಾನೆ.
ಮೃತರನ್ನು ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಎಂದು ಗುರುತಿಸಲಾಗಿದೆ.
ಘಟನೆ ನಡೆದಿದ್ದು ಹೇಗೆ?
ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನ ಸ್ಥಳಕ್ಕೆ 14 ಮಂದಿ ಪ್ರಯಾಣಿಸುತ್ತಿದ್ದ ಮಂತ್ರಾಲದಯ ಕ್ರೂಸರ್ ವಾಹನ ತೆರಳುತ್ತಿತ್ತು.
ಈ ವೇಳೆ ಸಿಂಧನೂರು ನಗರದ ಹೊರವಲಯದಲ್ಲಿ ತೆರಳುವ ವೇಳೆ ಆಕ್ಸಿಲೇಟರ್ ಕಟ್ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿ 10 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
Also read: ಕಲಾ ಸಾಧನೆಗೆ ಬದ್ಧತೆ ಬಹಳ ಮುಖ್ಯ | ಹಿರಿಯ ಕಲಾವಿದ ಪ್ರೊ.ಕೆ. ರಾಮಮೂರ್ತಿರಾವ್ ಅಭಿಮತ
ಗಾಯಾಳು ವಿದ್ಯಾರ್ಥಿಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಚಾಲಕನ ಅತಿವೇಗ ಹಾಗೂ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
ಶ್ರೀಗಳ ಕಂಬನಿ
ತಮ್ಮ ಮಠದ ವಿದ್ಯಾರ್ಥಿಗಳು ತೆರಳುತ್ತಿದ್ದ ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಹಾಗೂ ಓರ್ವ ಚಾಲಕ ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ಶ್ರೀಪಾದಂಗಳವರು #Subhudendra Shri of Mantralaya Mutt ಕಂಬನಿ ಮಿಡಿದಿದ್ದಾರೆ.
ಮೃತರ ಆತ್ಮಕ್ಕೆ ರಾಯರು ಸದ್ಗತಿ ಕರುಣಿಸಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಶ್ರೀಗಳು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post