ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಹರಡುವಿಕೆ ತಡೆಗಾಗಿ ತಮ್ಮ ಜೀವವನ್ನೂ ಲೆಕ್ಕಿಸಿದೇ ಸಾರ್ವಜನಿಕರ ಆರೋಗ್ಯ ಕಾಳಜಿ ಮಾಡಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ. pic.twitter.com/FerrOVkA5P
— B Sriramulu (@sriramulubjp) April 2, 2020
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.
ಮನೆ ಬಾಗಿಲಿಗೆ ಬಂದು #Covid19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ!! pic.twitter.com/1pAJOEZCrE
— B Sriramulu (@sriramulubjp) April 2, 2020
Get in Touch With Us info@kalpa.news Whatsapp: 9481252093
Discussion about this post