ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿ ವಿಶ್ರಾಂತಿ ಪಡೆಯುತ್ತಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಭೇಟಿಯಾದ ನಟ ಅಜಯ್ ರಾವ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಸಚಿವರನ್ನು ಭೇಟಿಯಾದ ಅಜಯ್ ರಾವ್, ಸಚಿವರ ಆರೋಗ್ಯ, ಯೋಗಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ಈಶ್ವರಪ್ಪನವರ ಪುತ್ರ ಕೆ.ಇ. ಕಾಂತೇಶ್, ಮಹಾನಗರ ಪಾಲಿಕೆ ಸದಸ್ಯರಾದ ಈ ವಿಶ್ವಾಸ ಸ್ನೇಹಿತರಾದ ಹರ್ಷವರ್ಧನ, ಸಂತೋಷ್, ಮಧು ಇದ್ದರು.
Get In Touch With Us info@kalpa.news Whatsapp: 9481252093
Discussion about this post