ಬೆಂಗಳೂರು: ನಿನ್ನೆ ವಿಧಿವಶರಾದ ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಮಂಡ್ಯ ಜನತೆ ಪಡೆದುಕೊಳ್ಳುವ ಸಲುವಾಗಿ ಸಂಜೆ 4 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೂ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಂಡ್ಯದಲ್ಲಿ ಹುಟ್ಟಿ ಬೆಳೆದ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತಂದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಬೇಕು ಎಂದು ಮಂಡ್ಯ ಜಿಲ್ಲೆಯಲ್ಲಿ ಇಂದು ನಸುಕಿನಿಂದಲೇ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯನ್ನೂ ಸಹ ಬಂದ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಪಾರ್ಥಿವ ಶರೀರ ತಂದು, ಸಾರ್ವಜನಿಕರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಇಡಲು ನಿರ್ಧರಿಸಲಾಗಿದೆ.
ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ಯಲು ಸೇನಾ ಹೆಲಿಕಾಪ್ಟರ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿತ್ತು. ಇದಕ್ಕೆ ತತಕ್ಷಣ ಸ್ಪಂದಿಸಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೇನಾ ಹೆಲಿಕಾಪ್ಟರ್ ಜೊತೆಯಲ್ಲಿ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆ ಮಂಡ್ಯಕ್ಕೆ ಪಾರ್ಥಿವ ಶರೀರವನ್ನು ತಂದು ಸಂಜೆ 4 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲು ನಿರ್ಧರಿಸಲಾಗಿದೆ.
Tumkur Traffic Relief : New Limited Height Subway Opens At Old Bheemasandra Gate
Kalpa Media House | Tumkur | Union Minister of State for Railways and Jal Shakti V. Somanna inaugurated the newly...
Read moreDetails






