ಕಲ್ಪ ಮೀಡಿಯಾ ಹೌಸ್ | ಕೊಟ್ಟಿಯೂರು(ಕೇರಳ) |
ಡೆವಿಲ್ ಚಿತ್ರೀಕರಣ ಮುಕ್ತಾಯಗೊಂಡ ಬೆನ್ನಲ್ಲೇ ನಟ ದರ್ಶನ್ #ActorDarshan ಅವರು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೇರಳದ ಕೊಟ್ಟಿಯೂರು #Kottiyur ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಣ್ಣೂರಿನ #Kannur ಸಮೀಪವಿರುವ ಕೊಟ್ಟಿಯೂರು ಶಿವನ ದೇವಾಲಯಕ್ಕೆ ತಮ್ಮ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಧನ್ವೀರ್ ಕೂಡ ದರ್ಶನ್’ಗೆ ಸಾಥ್ ನೀಡಿದ್ದಾರೆ.
ದರ್ಶನ್ ಹಾಗೂ ಅವರ ಕುಟುಂಬ ಭೇಟಿ ನೀಡಿರುವ ಈ ಕೊಟ್ಟಿಯೂರು ದೇವಾಲಯ ಧಾರ್ಮಿಕ ಮಹತ್ವ ಹೊಂದಿರುವ ದೇವಾಲಯ ಆಗಿದೆ.
ಕೊಟ್ಟಿಯೂರು ಶಿವ ದೇವಾಲಯವು ಭಾರತದ ಅತ್ಯಂತ ಪ್ರಾಚೀನ ಮತ್ತು ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿವರ್ಷವೂ ವೈಶಾಖ ಮಾಹೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ. ಈ ದೇವಸ್ಥಾನವು ದಕ್ಷಿಣ ಕಾಶಿ ಎಂದು ಕರೆಯಲ್ಪಡುವುದರಿಂದ ಅದರ ಧಾರ್ಮಿಕ ಮಹತ್ವವು ಅಪಾರವಾಗಿದೆ.
ಕೊಟ್ಟಿಯೂರಿನಲ್ಲಿ ಎರಡು ದೇವಸ್ಥಾನಗಳಿವೆ. ಇಕ್ಕರೆ ಕೊಟ್ಟಿಯೂರು ಮತ್ತು ಅಕ್ಕರೆ ಕೊಟ್ಟಿಯೂರು. ಅಕ್ಕರೆ ಕೊಟ್ಟಿಯೂರು ದೇವಾಲಯವು ವೈಶಾಖ ಮಹೋತ್ಸವದ ಸಮಯದಲ್ಲಿ ಮಾತ್ರ ತೆರೆಯಲ್ಪಡುವ ತಾತ್ಕಾಲಿಕ ಮಂದಿರವಾಗಿದೆ. ಆದರೆ ಇಕ್ಕರೆ ಕೊಟ್ಟಿಯೂರು ದೇವಾಲಯವು ನಿಯಮಿತ ಪೂಜಾ ವಿಧಿಗಳನ್ನು ನಡೆಸುವ ಶಾಶ್ವತ ಮಂದಿರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post