ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನಟ ದರ್ಶನ್ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸಂಕ್ರಾಂತಿ ಶುಭಾಶಯ ಕೋರಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ದರ್ಶನ್, ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ ಎಂದಿದ್ದಾರೆ.
Also Read>> ಪವಾಡ! ಅನಾರೋಗ್ಯದಿಂದ ನರಳುತ್ತಿದ್ದ ಸ್ಟೀವ್ ಜಾಬ್ಸ್ ಪತ್ನಿಗೆ ಗಂಗಾ ಸ್ನಾನದಿಂದ ಗುಣಮುಖ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳೂ ಜ.10ರಂದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post