ಬೆಂಗಳೂರು: ಜಸ್ಟ್ ಆಸ್ಕಿಂಗ್ ಎಂಬ ಹ್ಯಾಶ್‌ಟ್ಯಾಗ್ ಬಳಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಜ್ಜೆಹೆಜ್ಜೆಯಲ್ಲಿ ಜರಿಯುವ ನಟ ಪ್ರಕಾಶ್ ರಾಜ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಈ ವಿಚಾರವನ್ನು ತಮ್ಮ ಟ್ವಿಟರ್ ನಲ್ಲಿ ಸ್ವತಃ ಅವರೇ ಹೇಳಿಕೊಂಡಿದ್ದು, ಎಲ್ಲರಿಗೂ ಹೊಸವರ್ಷ ಶುಭಾಶಯಗಳು. ಹೊಸ ವರ್ಷಾರಂಭ, ಹೆಚ್ಚಿನ ಜವಾಬ್ದಾರಿಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಆದರೆ, ಯಾವ ಕ್ಷೇತ್ರ ಹಾಗೂ ಹೆಚ್ಚಿನ ಮಾಹಿತಿಗಳನ್ನು ಶೀಘ್ರದಲ್ಲೇ ತಿಳಿಸುತ್ತೇನೆ ಎಂದಿದ್ದಾರೆ.
HAPPY NEW YEAR TO EVERYONE..a new beginning .. more responsibility.. with UR support I will be contesting in the coming parliament elections as an INDEPENDENT CANDIDATE. Details of the constituency soon. Ab ki baar Janatha ki SARKAR #citizensvoice #justasking in parliament too..
— Prakash Raj (@prakashraaj) December 31, 2018
ಅಲ್ಲದೇ, ಅಬ್ ಕಿ ಬಾರ್ ಜನತಾ ಕಿ ಸರ್ಕಾರ್ ಎಂದು ಹೇಳಿಕೊಂಡಿರುವ ಪ್ರಕಾಶ್ ರಾಜ್, ಸಿಟಿಜನ್ಸ್ ವಾಯ್ಸ್, ಜಸ್ಟ್ ಆಸ್ಕಿಂಗ್ ಇನ್ನು ಮುಂದೆ ಪಾರ್ಲಿಮೆಂಟಲ್ಲೂ ಸಹ ಮುಂದುವರೆಯಲಿದೆ ಎಂದು ಹೇಳಿಕೊಂಡಿದ್ದಾರೆ.
Discussion about this post