ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್ ನಟ ಸೈಫ್ ಅಲಿ ಖಾನ್ #saifalikhan ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, #stabbed ಅವರನ್ನು ನಗರದ ಪ್ರತಿಷ್ಠಿತ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ #LilavathiHospital ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Also Read>> ಕಲಾವಿದರ ಕೈಚಳಕ | 10 ಚಿತ್ರ | ವೃದ್ಧಿಸಿದ ಬೆಂಗಳೂರಿನ ಸೌಂದರ್ಯ | ಏನೆಲ್ಲಾ ಕಥೆ ಹೇಳುತ್ತಿವೆ ನೋಡಿ
ಸೈಫ್ ಅವರಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ.
ದರೋಡೆಗೆ ದುಷ್ಕರ್ಮಿಗಳು ನುಗ್ಗಿದ ವಿಚಾರ ತಿಳಿಯುತ್ತಿದ್ದಂತೆಯೇ ಮನೆಯಲ್ಲಿದ್ದವರು ಎಚ್ಚರಗೊಂಡ ನಂತರ ದರೋಡೆಕೋರ ಸ್ಥಳದಿಂದ ಪರಾರಿಯಾಗಿದ್ದಾನೆ.
Also Read>> ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪತ್ನಿ ಕರೀನಾ ಕಪೂರ್ ಮತ್ತು ಇಬ್ಬರೂ ಮಕ್ಕಳು ಸೇಫ್ ಆಗಿದ್ದಾರೆ.
ಸೈಫ್ ಅಲಿ ಖಾನ್ ನಿವಾಸಕ್ಕೆ ಮುಂಬೈ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post