ಕಲ್ಪ ಮೀಡಿಯಾ ಹೌಸ್ | ಸೊರಬ |
ಪುರಾತನ ಪ್ರಸಿದ್ಧ ಚಂದ್ರಗುತ್ತಿ ಶ್ರೀರೇಣುಕಾಂಬಾ ದೇವಾಲಯಕ್ಕೆ ನಟ ಶಿವರಾಜಕುಮಾರ್ #Shivarajkumar ಹಾಗೂ ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #GeethaShivarajkumar ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಿನ್ನೆ ಬೆಟ್ಟ ಹತ್ತಿ ಚಂದ್ರಗುತ್ತಿ ದೇವಾಲಯಕ್ಕೆ #ChandraguttiTemple ತೆರಳಿದ ಶಿವರಾಜಕುಮಾರ್ ದಂಪತಿ, ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಯ ಒಳಿತಿಗಾಗಿ ಪ್ರಾರ್ಥಿಸಿದ್ದೇವೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಸೇರಿದಂತೆ ಜಿಲ್ಲೆ, ತಾಲೂಕು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post