ಕಲ್ಪ ಮೀಡಿಯಾ ಹೌಸ್ | ಕುಕ್ಕೆ ಸುಬ್ರಹ್ಮಣ್ಯ |
ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಹಾಗೂ ಅವರ ಪತಿ ನಿನ್ನೆ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯಕ್ಕೆ #KukkeSubrahmanya ಭೇಟಿ ನೀಡಿ, ವಿಶೇಷ ಪೂಜೆ ನೆರವೇರಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಎರಡು ದಶಕದಿಂದಲೇ ಸೂಪರ್ ಸ್ಟಾರ್ ನಟಿಯಗಿರುವ ನಯನತಾರಾ ಅವರು ತಮ್ಮ ಪತಿ, ನಿರ್ದೇಶಕ ವಿಘ್ನೇಷ್ ಶಿವನ್ #DirectorVigneshSivan ಅವರೊಟ್ಟಿಗೆ ಕರ್ನಾಟಕದ ಖ್ಯಾತ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು.
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರ್ಪ ಸಂಸ್ಕಾರ #SarpaSamskara ಪೂಜೆಯನ್ನು ನೆರವೇರಿಸಿದರು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿಗೆ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಗೌರವಿಸಿದರು. ನಟಿಯೊಂದಿಗೆ ಕೆಲವರು ಫೋಟೊ ಸಹ ಕ್ಲಿಕ್ಕಿಸಿಕೊಂಡರು.
ಇತ್ತೀಚೆಷ್ಟೇ ಬಾಲಿವುಡ್ ನಟಿ ಕತ್ರಿನಾ ಕೈಫ್, ಶಿಲ್ಪಾ ಶೆಟ್ಟಿ ಇನ್ನೂ ಹಲವಾರು ಸೆಲೆಬ್ರಿಟಿಗಳು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಮಾಡಿಸಿರುವುದು ವಿಶೇಷವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post