ಕಲ್ಪ ಮೀಡಿಯಾ ಹೌಸ್ | ಆದಂಪುರ |
ನಮ್ಮ ಹೆಣ್ಣುಮಕ್ಕಳ ಸಿಂಧೂರ #Sindoor ಅಳಿಸಿದವರಿಗೆ ಭಾರತ ತಕ್ಕ ಪಾಠ ಕಲಿಸಿದೆ. ಭಾರತೀಯ ವಾಯುಪಡೆ #Indian Airforce ದೇಶ ಹೆಮ್ಮೆಪಡುವಂತೆ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಇಂದು ಪಂಜಾಬ್‌ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ, ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, #PM Narendra Modi ಆಪರೇಷನ್ ಸಿಂಧೂರ್ #Operation Sindoor ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಪ್ರಯತ್ನ ಮತ್ತು ಶೌರ್ಯವನ್ನು ಶ್ಲಾಘಿಸಿದರು.
ಪಾಕಿಸ್ತಾನದ ಡ್ರೋನ್, #Pakistan Drone ಅವರ ಯುಎವಿಗಳು, ವಿಮಾನಗಳು ಮತ್ತು ಕ್ಷಿಪಣಿಗಳು ಇವೆಲ್ಲವೂ ನಮ್ಮ ಸಮರ್ಥ ವಾಯು ರಕ್ಷಣೆಯ ಮುಂದೆ ವಿಫಲವಾದವು. ದೇಶದ ಎಲ್ಲಾ ವಾಯುನೆಲೆಗಳ ನಾಯಕತ್ವ ಮತ್ತು ಭಾರತೀಯ ವಾಯುಪಡೆಯ ಪ್ರತಿಯೊಬ್ಬ ಯೋಧರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನೀವು ನಿಜವಾಗಿಯೂ ಅದ್ಭುತ ಕೆಲಸ ಮಾಡಿದ್ದೀರಿ. ಐಎಎಫ್ ಭಾರತವನ್ನು ಹೆಮ್ಮೆಪಡುವಂತೆ ಮಾಡಿದೆ. ವಿರೋಧಿಗಳು ನಮ್ಮ ಮೇಲೆ ಹಲವಾರು ಬಾರಿ ದಾಳಿ ಮಾಡಲು ಪ್ರಯತ್ನಿಸಿದರು. ಆದರೆ ನಾವು ಅವರ ದಾಳಿಯನ್ನು ಪ್ರತಿ ಬಾರಿಯೂ ವಿಫಲಗೊಳಿಸಿದ್ದೇವೆ ಎಂದರು.
ಪಾಕಿಸ್ತಾನದಲ್ಲಿ ಭಯೋತ್ಪಾದಕರು #Terrorist ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ಅವರಿಗೆ ನೀಡಿದ್ದೇವೆ. ನಾವು ಅವರನ್ನು ಧೂಳೀಪಟ ಮಾಡಿದ್ದೇವೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಪಾಕಿಸ್ತಾನಿ ಸೈನ್ಯವನ್ನು ಸೋಲಿಸಿವೆ. ನಾವು ಅವರ ಮನೆಯೊಳಗೆ ನುಗ್ಗಿ ಹೊಡೆದಿದ್ದೇವೆ. ನಮ್ಮ ಧರ್ಮದ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳನ್ನು ಹಿಡಿಯುವುದು ನಮ್ಮ ಸಂಪ್ರದಾಯ. ಆದ್ದರಿಂದ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಕಸಿದುಕೊಂಡಾಗ ನಾವು ಭಯೋತ್ಪಾದಕರನ್ನು ಅವರ ಸ್ವಂತ ಮನೆಗಳಿಗೆ ನುಗ್ಗಿ ಹತ್ತಿಕ್ಕಿದ್ದೇವೆ ಎಂದು ಮೋದಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post