ಕಲ್ಪ ಮೀಡಿಯಾ ಹೌಸ್ | ಹೊಳೆಹೊನ್ನೂರು |
ಆಗುಂಬೆ (Agumbe) ಪೊಲೀಸ್ ಠಾಣೆಯ ಮುಖ್ಯ ಪೇದೆ ಹಾಗೂ ಆನವೇರಿ ಗ್ರಾಮದ ನಿವಾಸಿ ಡಿ. ಶಿವಣ್ಣ (52) ಅವರು ಮಣಿಪಾಲದ (Manipal) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ವಾರ ಕರ್ತವ್ಯದಲ್ಲಿದ್ದ ವೇಳೆ ಶಿವಣ್ಣ ಅವರು ಅಸ್ವಸ್ಥಗೊಂಡು ತಲೆಸುತ್ತಿ ಬಿದ್ದಿದ್ದರು. ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
Also Read>> ಕುವೆಂಪು ವಿವಿ: ಆ.13, 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ ಕೌನ್ಸಿಲಿಂಗ್
ಶಿವಣ್ಣ ಅವರ ನಿಧನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಜಿಲ್ಲಾ ಪೊಲೀಸ್ ತಂಡ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಅಂತಿಮ ನಮನ ಸಲ್ಲಿಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಶಿವಣ್ಣ ಅವರು ತಮ್ಮ 20 ವರ್ಷಗಳ ಪೊಲೀಸ್ ಸೇವೆಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ, ತೀರ್ಥಹಳ್ಳಿ ತಾಲೂಕಿನ ಮಾಳೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದರು.
ಪ್ರಸ್ತುತ ಆಗುಂಬೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಕುಟುಂಬ ಮಾಳೂರಿನಲ್ಲಿರುವ ಪೊಲೀಸ್ ಇಲಾಖೆಯ ವಸತಿ ಗೃಹದಲ್ಲಿ ವಾಸವಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಸ್ವಂತ ಜಮೀನಿನಲ್ಲಿ ಮಂಗಳವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










