ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಗುಜರಾತ್ನ ಅಹಮದಾಬಾದ್ನಲ್ಲಿ ಇಂದು ಸಂಭವಿಸಿದ ವಿಮಾನ ದುರಂತದಲ್ಲಿ #Ahamedabad Plane Crash 20ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು #Medical Students ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಪತನಗೊಂಡ ವಿಮಾನ ಏರ್ಪೋರ್ಟ್ಗೆ ಸಮೀಪದಲ್ಲೇ ಇರುವ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲಿಗೆ ಅಪ್ಪಳಿಸಿದ ಪರಿಣಾಮ ಹಾಸ್ಟೆಲಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೆಡಿಕಲ್ ಕಾಲೇಜು ಮೇಲೆ ವಿಮಾನ ಬಿದ್ದಿದೆ ಬೆಂಕಿಯ ಕೆನ್ನಾಲಿಗೆ ಹಾಸ್ಟೆಲ್ ಹೊತ್ತಿ ಉರಿದಿದೆ. ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಊಟಕ್ಕೆಂದು ಬಂದಾಗ ಈ ಒಂದು ದುರಂತ ಸಂಭವಿಸಿದೆ. ಊಟ ಮಾಡುವಾಗಲೇ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post