ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಅಹಮದಾಬಾದ್ ವಿಮಾನ ದುರಂತ #Ahmedabad Plane Crash ದುರ್ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಪ್ರದಾನಿ ನರೇಂದ್ರ ಮೋದಿಯವರು #PM Narendra Modi ಇಂದು ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.
ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ನೇರವಾಗಿ ಮೇಘನಿನಗರ ಪ್ರದೇಶದ ಅಪಘಾತದ ಸ್ಥಳಕ್ಕೆ ಕಾರಿನಲ್ಲಿ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು, ಕೇಂದ್ರ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಂಘವಿ ಸಾಥ್ ನೀಡಿದ್ದಾರೆಂದು ವರದಿಯಾಗಿದೆ.
ವಿಮಾನ ದುರಂತ ಸ್ಥಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post