ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
2008ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ #Ahmadabad blast ಮುಖ್ಯ ಗುರಿ ಇಂದಿನ ಪ್ರಧಾನಿ, ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರೇ #PM Narendra Modi ಆಗಿದ್ದರು ಎಂಬ ಸ್ಪೋಟಕ ಮಾಹಿತಿ ಈಗ ಬಹಿರಂಗವಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಸ್ಪೋಟ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಿನ್ನೆ ತೀರ್ಪು ಪ್ರಕಟಿಸಿದ್ದು, ತಮ್ಮ ತೀರ್ಪಿನಲ್ಲಿ ನ್ಯಾಯಾಧೀಶರು ಈ ವಿಚಾರ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ.
Also Read: ಸಂವಿಧಾನ ವಿರೋಧ ಹೇಳಿಕೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯ
ಅಂದು ಸ್ಪೋಟದಲ್ಲಿ ಗಾಯಗೊಂಡರವನ್ನು ಕರೆತರುವ ಆಸ್ಪತ್ರೆಗಳಿಗೆ ಸಿಎಂ ಮೋದಿಯವರು ಭೇಟಿ ನೀಡುವ ಸಾಧ್ಯತೆಗಳನ್ನು ಲೆಕ್ಕ ಹಾಕಿ, ಅಲ್ಲ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಲಾಗಿತ್ತು ಎಂಬುದು ವರದಿಯಾಗಿದೆ. ಅಲ್ಲದೇ, ಇಂತಹ ಸಾಧ್ಯತೆಯನ್ನು ತಳ್ಳಿಹಾಕುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post