ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಗುಜರಾತ್‌ನ ಅಹಮದಾಬಾದ್ ನಿಲ್ದಾಣದಿಂದ #Flight Crash in Ahmadabad ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ #Air India Flight ಜನ ವಸತಿ ಪ್ರದೇಶದಲ್ಲಿ ಪತನ ಹೊಂದಿರುವ ಭೀಕರ ಘಟನೆ ಗುಜರಾತ್ ‘ ನ ಅಹಮದಾಬಾದ್ ನಗರದಲ್ಲಿ ನಡೆದಿದೆ.
ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದ್ದು, ಅಪಘಾತಕ್ಕೀಡಾದ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ #Vijay Rupani ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರ ವಾಸ್ತವ ಸ್ಥಿತಿಯ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.
ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, 52 ಬ್ರಿಟೀಷ್ ಪ್ರಜೆಗಳು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post