ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಮೋದಿ ಉಪನಾಮ ವಿಚಾರದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ Rahul Gandhi ಹಿನ್ನಡೆಯಾಗಿದ್ದು, ಮೆಟ್ರೋಪಾಲಿಟನ್ ನ್ಯಾಯಾಲಯ ನೀಡಿದ್ದ ಜೈಲು ಶಿಕ್ಷೆಯನ್ನು ಸೂರತ್ ಸೆಷನ್ಸ್ ಕೋರ್ಟ್ Surat session Court ಎತ್ತಿ ಹಿಡಿದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಪಿ. ಮೊಗೇರ ಅವರು ಇಂದು ರಾಹುಲ್ ಅರ್ಜಿಯನ್ನು ವಜಾಗೊಳಿಸಿ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಗೆ ಭಾರೀ ಹಿನ್ನಡೆ ಉಂಟಾಗಿದ್ದು, ಮುಂದಿನ ನಡೆಯೇನು ಎಂಬುದು ಕುತೂಹಲ ಮೂಡಿಸಿದೆ.
Also read: ಪಕ್ಷ ತಮ್ಮನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಕ್ಕೆ ಅಭಿನಂದನೆ: ಎಸ್.ಎನ್. ಚನ್ನಬಸಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post