ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೂ #Ahmedabad Plane Crash ಮುನ್ನ ವಿಮಾನದ ಪೈಲಟ್ Mayday ಎಚ್ಚರಿಕೆ ನೀಡಿ ಮೌನವಾದರು ಎಂದು ಮೂಲಗಳು ತಿಳಿಸಿವೆ.
ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ #Air India Flight ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ವಿಮಾನ ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ವಿಮಾನದ ಪೈಲಟ್ ಸುಮಿತ್ ಸಭರ್ವಾಲ್ ಎಂಬುವವರು ಅಪಘಾತಕ್ಕೂ ಮುನ್ನ Mayday ಎಚ್ಚರಿಕೆ ನೀಡಿದ್ದರು. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಈ ಬಗ್ಗೆ ಕ್ರಮ ಕೈಗೊಳ್ಳುವಷ್ಟರಲ್ಲೇ ಆತ ಮೌನವಾಗಿದ್ದ. ಬಹುಶಃ ಇದೇ ಸಂದರ್ಭದಲ್ಲೇ ವಿಮಾನ ಪತನವಾಗಿರಬಹುದು ಎಂದು ಶಂಕಿಸಲಾಗಿದೆ.
ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ. ವಿಮಾನ ಕಟ್ಟಡಕ್ಕೆ ಢಿಕ್ಕಿಯಾಗುತ್ತಲೇ ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದ್ದು ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕನಿಷ್ಠ ಒಂದು ಡಜನ್ ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post