ಕಲ್ಪ ಮೀಡಿಯಾ ಹೌಸ್ | ಅಲಹಾಬಾದ್ |
ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ Krishna Janmabhoomi ಸಂಬಂಧಿಸಿದಂತೆ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ.
ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿರುವ ಅಲಹಾಬಾದ್ ಹೈಕೋರ್ಟ್ Alahabad Highcourt ವಿವಾದಿತ ಶಾಹಿ ಈದ್ಗಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ.

Also read: ಡಿ.15ರಂದು ಇ-ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ ವಿಚಾರ ಗೋಷ್ಠಿ
ಮಹತ್ವದ ತೀರ್ಪು
ವಕೀಲ ಕಮಿಷನರ್‌ನಿಂದ ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಒತ್ತಾಯಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಅನುಮತಿಸಿದೆ. ಸಮೀಕ್ಷೆ ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುವುದು. ಶಾಹಿ ಈದ್ಗಾ ಮಸೀದಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ನಮ್ಮ ಬೇಡಿಕೆಯು ಶಾಹಿ ಈದ್ಗಾ ಮಸೀದಿ ಸರ್ವೆಯಾಗಿತ್ತು. ಶಾಹಿ ಈದ್ಗಾ ಸಂಕೀರ್ಣದಲ್ಲಿ ಹಿಂದೂ ದೇವಾಲಯದ ಸಾಕಷ್ಟು ಚಿಹ್ನೆಗಳು ಇವೆ. ಮತ್ತು ನಿಜವಾದ ಸ್ಥಾನವನ್ನು ತಿಳಿಯಲು, ವಕೀಲ ಕಮಿಷನರ್ ಅಗತ್ಯವಿದೆ. ಇದು ನ್ಯಾಯಾಲಯದ ಮಹತ್ವದ ತೀರ್ಪು ಎಂದು ಕೃಷ್ಣ ಜನ್ಮಭೂಮಿ ಪ್ರಕರಣ ಹಿಂದೂ ಸಂಘಟನೆಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.











Discussion about this post