ಕಲ್ಪ ಮೀಡಿಯಾ ಹೌಸ್ | ಅಲಹಾಬಾದ್ |
ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ Gyanavapi Masjid ವೈಜ್ಞಾನಿಕ ಸರ್ವೆಗೆ ಅಲಹಾಬಾದ್ ಹೈಕೋರ್ಟ್ Alahabadh Highcourt ಅನುಮತಿ ನೀಡಿದ್ದು, ಈ ಮೂಲಕ ಹಿಂದೂಗಳಿಗೆ ಮತ್ತೊಮ್ಮೆ ಭರ್ಜರಿ ಜಯ ದೊರೆತಿದೆ.
ಈ ಕುರಿತಂತೆ ಜುಲೈ 27ರಂದು ಎರಡೂ ಕಡೆಯವರ ವಾದ ಆಲಿಸಿದ್ದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಇದರ ಮಹತ್ವದ ತೀರ್ಪು ನೀಡಿರುವ ನ್ಯಾಯಾಲಯ, ಜಿಲ್ಲಾ ಸೆಷೆನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು, ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಹಿಂದೂಗಳ ಪರವಾಗಿ ಮಾತನಾಡಿರುವ ಮುಖಂಡ ವಿಷ್ಣು ಶಂಕರ್ ಜೈನ್, ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್’ಐ) ಸಮೀಕ್ಷೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿಸಿದ್ದಾರೆ.
ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಜುಲೈ 21ರ ಆದೇಶವನ್ನು ಪ್ರಶ್ನಿಸಿತ್ತು.
ಜುಲೈ 21 ರಂದು ವಾರಣಾಸಿ ಜಿಲ್ಲಾ ನ್ಯಾಯಾಧೀಶ ಎ.ಕೆ. ವಿಶ್ವೇಶ ಅವರು ಮೇ 16, 2023 ರಂದು ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಯ ಮೇರೆಗೆ ಜ್ಞಾನವಾಪಿ ಸಂಕೀರ್ಣದ ಎಎಸ್’ಐ ಸಮೀಕ್ಷೆಗೆ ಆದೇಶಿಸಿದರು. ಆದಾಗ್ಯೂ, ಜಿಲ್ಲಾ ನ್ಯಾಯಾಧೀಶರ ಆದೇಶವು ವುಜು ಖಾನಾ (ಅಬ್ಲೂಷನ್ ಕೊಳದ ಪ್ರದೇಶ) ಅನ್ನು ಹೊರತುಪಡಿಸಿತು. ಸಂಕೀರ್ಣವನ್ನು ಉನ್ನತ ನ್ಯಾಯಾಲಯದ ಆದೇಶದ ಮೇರೆಗೆ ಮೊಹರು ಮಾಡಲಾಗಿದೆ.
ಈ ಹಿಂದೆ ಅಲಹಾಬಾದ್ ಹೈಕೋರ್ಟ್ ವಾರಣಾಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಯನ್ನು ಪ್ರಾರಂಭಿಸದಂತೆ ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ (ಎಎಸ್’ಐ) ಗೆ ಸೂಚಿಸಿದ್ದು, ಎಎಸ್’ಐನಿಂದ ವಿವರವಾದ ವೈಜ್ಞಾನಿಕ ಸಮೀಕ್ಷೆಯನ್ನು ಸುಪ್ರೀಂ ಕೋರ್ಟ್ ಜುಲೈ 26 ರ ಸಂಜೆ 5 ರವರೆಗೆ ತಡೆಹಿಡಿದ ನಂತರ ಈ ವಿಷಯದ ವಿಚಾರಣೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post