No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಕಾನೂನು ಕಲ್ಪ

ಕಾನೂನು ಕಲ್ಪ | ಆರ್ಥಿಕ ಸ್ವಾತಂತ್ರ್ಯ ಹಾಗೂ ಆದಾಯವಿರುವ ಪತ್ನಿಗೆ ಜೀವನಾಂಶ ನೀಡಲಾಗದು

kalpa News by kalpa News
October 24, 2025
in ಕಾನೂನು ಕಲ್ಪ
0
ಕಾನೂನು ಕಲ್ಪ | ಆರ್ಥಿಕ ಸ್ವಾತಂತ್ರ್ಯ ಹಾಗೂ ಆದಾಯವಿರುವ ಪತ್ನಿಗೆ ಜೀವನಾಂಶ ನೀಡಲಾಗದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |ಸ್ವಂತ ದುಡಿಮೆ ಹಾಗೂ ಉತ್ತಮ ಆದಾಯದ ಮೂಲವಿರುವ ಪತ್ನಿ ತನ್ನ ಗಂಡನಿಂದ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕ್ಷೇತ್ರಪಾಲ್ ಹಾಗೂ ಹರೀಶ್ ವೈದ್ಯನಾಥನ್ ಅವರನ್ನು ಒಳಗೊಂಡ ನ್ಯಾಯಪೀಠವು, ಭಾರತೀಯ ರೈಲ್ವೆ ಟ್ರಾಫಿಕ್ ಸರ್ವಿಸ್ ನ ಉನ್ನತ ಹುದ್ದೆಯಲ್ಲಿದ್ದ ಮಹಿಳೆಗೆ ಕೌಟುಂಬಿಕ ನ್ಯಾಯಾಲಯವು ಶಾಶ್ವತ ಜೀವನಾಂಶ ನಿರಾಕರಿಸಿ 2023ರಲ್ಲಿ ನೀಡಿದ ತೀರ್ಪನ್ನು ಎತ್ತಿ ಹಿಡಿದಿದೆ.

“ಜೀವನಾಂಶ ನೀಡುವುದು ಸಾಮಾಜಿಕ ನ್ಯಾಯದ ತತ್ವಗಳ ಆಶಯಗಳಿಗೆ ಅನುಸಾರವಾಗಿ. ದಾಂಪತ್ಯದಲ್ಲಿ ಬಿರುಕು ಮೂಡಿ ನಂಬಿದವರ ಆಸರೆಯಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಬೀಳಬಾರದು ಎಂಬುದು ಇದರ ಉದ್ದೇಶ. ಇದನ್ನು ಸ್ವಾವಲಂಬಿ ಜೀವನಕ್ಕೆ ಬೇಕಾಗುವ ಆದಾಯವಿರುವ ವ್ಯಕ್ತಿ ತನ್ನ ಪತಿ ಅಥವಾ ಪತ್ನಿಗೆ ಸಮಾನವಾದ ಆರ್ಥಿಕ ಸ್ಥಿತಿಯನ್ನು ತನ್ನದಾಗಿಸಿಕೊಳ್ಳಲು ದುರುಪಯೋಗಪಡಿಸಿಕೊಳ್ಳಬಾರದು” ಎಂದಿದೆ.
ಜೀವನಾಂಶದ ಪ್ರಕರಣದಲ್ಲಿ ಅರ್ಜಿದಾರರು ತಮ್ಮ ಆರ್ಥಿಕ ಅವಶ್ಯಕತೆಗಳನ್ನು ಸಾಬೀತುಪಡಿಸಬೇಕು. ನ್ಯಾಯಾಲಯ ಸಾಕ್ಷಿಗಳು ಹಾಗು ವಾಸ್ತವಾಂಶಗಳನ್ನು ಪರಿಶೀಲಿಸಿ ತೀರ್ಪು ನೀಡಬೇಕು ಎಂದು ಕೂಡ ಅಭಿಪ್ರಾಯಪಟ್ಟಿದೆ.

ವಕೀಲರೊಬ್ಬರು ಭಾರತೀಯ ರೈಲ್ವೆ ಟ್ರಾಫಿಕ್ ಸರ್ವಿಸ್ ನ ಉನ್ನತ ಹುದ್ದೆಯಲ್ಲಿದ್ದ ಮಹಿಳೆಯನ್ನು 2010ರಲ್ಲಿ ವಿವಾಹವಾಗಿದ್ದರು. ಇಬ್ಬರಿಗೂ ಇದು ಎರಡನೇ ವಿವಾಹವಾಗಿತ್ತು. ಗಂಭೀರ ಭಿನ್ನಾಭಿಪ್ರಾಯಗಳ ಕಾರಣದಿಂದ ಇಬ್ಬರು 14 ತಿಂಗಳ ನಂತರ ದೂರವಾಗಿದ್ದರು. ನಂತರ ಪತಿಯು ಕ್ರೌರ್ಯದ ಆಧಾರದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ, ಪತ್ನಿ ತನ್ನನ್ನು ಹಾಗು ತನ್ನ ಕುಟುಂಬದವರನ್ನು ಕೊಳಕು ಪದಗಳಿಂದ ನಿಂದಿಸುತ್ತಾರೆ ಎಂದು ಪತಿ ದೂರಿದ್ದರು. ಪತ್ನಿಯು ದಾಂಪತ್ಯದ ಹಕ್ಕುಗಳನ್ನು ಪತಿಗೆ ನಿರಾಕರಿಸುತ್ತಿದ್ದಾರೆ ಎಂದು ಕೂಡ ಆರೋಪ ಮಾಡಲಾಗಿತ್ತು.

ಪತ್ನಿಯು ಈ ಆರೋಪಗಳನ್ನು ನಿರಾಕರಿಸುತ್ತ, ಪತಿಯು ತನ್ನ ಜೊತೆ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಪತಿಯು ತನ್ನನ್ನು ಮದುವೆಯಾಗಿದ್ದು ತನ್ನ ಪ್ರಭಾವ ಬಳಸಿಕೊಂಡು ರೈಲ್ವೆ ಟ್ರಾಫಿಕ್ ಸರ್ವಿಸ್ ನ ಪ್ಯಾನೆಲ್ ವಕೀಲನಾಗುವ ಉದ್ದೇಶದಿಂದ ಎಂದು ಕೂಡ ಆರೋಪಿಸಿದ್ದರು.ವಿಚಾರಣೆಯಲ್ಲಿ ಪತ್ನಿ ತನ್ನ ಪತಿ ಹಾಗು ಆತನ ತಾಯಿಯನ್ನು ಅವಮಾನಕಾರಿ ಪದಗಳಿಂದ ನಿಂದಿಸಿರುವುದು, ಇದಕ್ಕೆ ಸಂಬಂಧಿಸಿದಂತೆ ಮೊಬೈಲ್ ಫೋನಿನಲ್ಲಿ ಕಳಿಸಿರುವ ಮೆಸೇಜುಗಳನ್ನು ಹಾಗು ತನ್ನ ಪತಿಯ ಜನನದ ಮೂಲದ ಬಗ್ಗೆಯೂ ಸಲ್ಲದ ಮಾತುಗಳನ್ನಾಡಿರುವುದನ್ನು ಗಣನೆಗೆ ತೆಗೆದುಕೊಂಡ ಕೌಟುಂಬಿಕ ನ್ಯಾಯಾಲಯವು, ಪತ್ನಿಯು ತನ್ನ ಪತಿ ಹಾಗು ಆತನ ಕುಟುಂಬದವರ ಜೊತೆ ಕ್ರೂರವಾಗಿ ನಡೆದುಕೊಂಡಿರುವುದು ಸಾಬೀತಾಗಿರುವುದರಿಂದ, ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 13ರ ಅಡಿಯಲ್ಲಿ ಪತಿಯ ವಿಚ್ಛೇದನದ ಮನವಿಯನ್ನು ಪುರಸ್ಕರಿಸಿತ್ತು.

ಇನ್ನು ಪತ್ನಿಯು ವಿಚ್ಛೇದನ ನೀಡಲು 50 ಲಕ್ಷ ರೂಪಾಯಿ ಜೀವನಾಂಶಕ್ಕೆ ಬೇಡಿಕೆಯಿಟ್ಟಿದ್ದು ಆಕೆಯ ಪಾಟಿ ಸವಾಲು ಹಾಗು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಪ್ರಮಾಣಪತ್ರಗಳ ಒಕ್ಕಣೆಯಿಂದ ಸಾಬೀತಾಗಿದ್ದರಿಂದ, ಕೌಟುಂಬಿಕ ನ್ಯಾಯಾಲಯವು, ಈ ಪ್ರಕರಣದಲ್ಲಿ ವಿಚ್ಛೇದನಕ್ಕೆ ವಿರೋಧ ದಾಂಪತ್ಯದ ಮರುಸ್ಥಾಪನೆಯ ಸದುದ್ದೇಶದಿಂದ ಅಲ್ಲ ಬದಲಾಗಿ ಹಣಕಾಸಿನ ಲೆಕ್ಕಾಚಾರದ ಮೇಲೆ ಮಾಡಲಾಗಿದೆ ಎಂದೂ ಅಭಿಪ್ರಾಯಪಟ್ತಿತ್ತು. ಕೌಟುಂಬಿಕ ನ್ಯಾಯಾಲದ ತೀರ್ಪನ್ನು ಎತ್ತಿ ಹಿಡಿದಿರುವ ಹೈಕೋರ್ಟ್, ಭಾವನಾತ್ಮಕ ಅಂಶಗಳ ಮೇಲೆ ಇಲ್ಲಿ ವಿಚ್ಛೇದನದ ಅರ್ಜಿಯನ್ನು ವಿರೋಧಿಸಿಲ್ಲ. ವಿರೋಧದ ಹಿಂದೆ ಆರ್ಥಿಕ ಲಾಭ ನಷ್ಟಗಳ ಲೆಕ್ಕಾಚಾರಗಳು ಇರುವುದು ಸ್ಪಷ್ಠವಾಗಿದೆ ಎಂದು ಹೇಳಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AdvocateDelhi High CourtKannada News WebsiteKanunu KalpaLatest News KannadaLegal Helpಕಾನೂನು ಕಲ್ಪದೆಹಲಿ ಹೈಕೋರ್ಟ್ಭಾರತೀಯ ರೈಲ್ವೆ ಟ್ರಾಫಿಕ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ | ಅ.26ರಂದು ನಮನ – ಚಿಂತನ – ಸನ್ಮಾನ ಕಾರ್ಯಕ್ರಮ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಜನರಿಗೆ ತಪ್ಪು ಮಾಹಿತಿ ರವಾನೆ: ಶಾಸಕ ಗೋಪಾಲಕೃಷ್ಣ ಬೇಳೂರು

kalpa News

kalpa News

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಜನರಿಗೆ ತಪ್ಪು ಮಾಹಿತಿ ರವಾನೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಜನರಿಗೆ ತಪ್ಪು ಮಾಹಿತಿ ರವಾನೆ: ಶಾಸಕ ಗೋಪಾಲಕೃಷ್ಣ ಬೇಳೂರು

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL