ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ #ManamohanSingh ಅವರ ನಿಧನದ ಹಿನ್ನೆಲೆಯಲ್ಲಿ ದೇಶದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ತುರ್ತು ಆದೇಶ ಹೊರಡಿಸಿದ್ದು, ದೇಶದಾದ್ಯಂತ ಏಳು ದಿನಗಳ ಕಾಲ ಶೋಕಚರಣೆ #NationalMourning ಘೋಷಿಸಿದೆ.
ಇನ್ನು ನಾಳೆ ಕೇಂದ್ರದ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ದೇಶದ ಎಲ್ಲ ಭಾಗಗಳಿಗೆ ಇದು ಅನ್ವಯವಾಗುತ್ತದೆ.
ಇದೇ ವೇಳೆ, ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ನಾಳೆ ಮುಂಜಾನೆ ತುರ್ತು ಸಂಪುಟ ಸಭೆಯನ್ನು ಕೇಂದ್ರ ಸರ್ಕಾರ ಕರೆದಿದೆ.
ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ವಿಶ್ವ ವಿಖ್ಯಾತ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದೇವೆ. ಡಿ.27ರ ನಾಳೆ ರಾಜ್ಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರವೂ ಸಹ ದೇಶದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ.
Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು.ಸಿಂಗ್ ಅವರ ರಾಜಕೀಯ ಜೀವನು 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು, ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.
1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ.
6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ. 1999 ರಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿಂಗ್, ಬಿಜೆಪಿಯ ವಿಜಯ್ ಕುಮಾರ್ ಮಲ್ಹೋತ್ರ ವಿರುದ್ಧ ಪರಾಭವಗೊಂಡಿದ್ದರು.
- ಅರ್ಥಶಾಸ್ತ್ರದಲ್ಲಿ ಬಿ.ಎ. (ಆನರ್ಸ್) 1952; ಅರ್ಥಶಾಸ್ತ್ರದಲ್ಲಿ ಎಂ.ಎ(ಪ್ರಥಮ ದರ್ಜೆ), 1954 ಪಂಜಾಬ್ ವಿಶ್ವವಿದ್ಯಾಲಯ, ಚಂಡೀಗಢ (ಆಗ ಹೋಶಿಯಾರ್ಪುರ, ಪಂಜಾಬ್), ಭಾರತ
- ಅರ್ಥಶಾಸ್ತ್ರದಲ್ಲಿ ಗೌರವ ಪದವಿ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯ – ಸೇಂಟ್ ಜಾನ್ಸ್ ಕಾಲೇಜು (1957)
- ಹಿರಿಯ ಉಪನ್ಯಾಸಕ, ಅರ್ಥಶಾಸ್ತ್ರ (1957-1959)
- ರೀಡರ್ (1959 – 1963)
- ಪ್ರೊಫೆಸರ್ (1963-1965)
- ಪ್ರೊಫೆಸರ್ ಆಫ್ ಇಂಟರ್ನ್ಯಾಷನಲ್ ಟ್ರೇಡ್ (1969 – 1971)
- ಅರ್ಥಶಾಸ್ತ್ರದಲ್ಲಿ ಡಿ.ಫಿಲ್, ಆಕ್ಸ್ಫರ್ಡ್ ವಿಶ್ವವಿದ್ಯಾಲಯ – ನಫೀಲ್ಡ್ ಕಾಲೇಜ್ (1962)
- ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್, ದೆಹಲಿ ವಿಶ್ವವಿದ್ಯಾಲಯ
- ಗೌರವ ಪ್ರಾಧ್ಯಾಪಕ (1966)
- ಚೀಫ್, ಫೈನಾನ್ಸಿಂಗ್ ಫಾರ್ ಟ್ರೇಡ್ ವಿಭಾಗ, ಯುಎನ್ಸಿಟಿಎಡಿ, ಯುನೈಟೆಡ್ ನೇಷನ್ಸ್ ಸೆಕ್ರೆಟರಿಯೇಟ್, ನ್ಯೂಯಾರ್ಕ್
1966: ಆರ್ಥಿಕ ವ್ಯವಹಾರಗಳ ಅಧಿಕಾರಿ 1966
- ಆರ್ಥಿಕ ಸಲಹೆಗಾರ, ವಿದೇಶಿ ವ್ಯಾಪಾರ ಸಚಿವಾಲಯ, ಭಾರತ (1971 – 1972)
- ಮುಖ್ಯ ಆರ್ಥಿಕ ಸಲಹೆಗಾರ, ಹಣಕಾಸು ಸಚಿವಾಲಯ, ಭಾರತ (1972 – 1976)
- ಗೌರವ ಪ್ರಾಧ್ಯಾಪಕರು, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ, ನವದೆಹಲಿ (1976)
- ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶಕ (1976-1980)
- ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕ (1976-1980)
- ಆಡಳಿತ ಮಂಡಳಿ, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್, ಮನಿಲಾ
- ಕಾರ್ಯದರ್ಶಿ, ಹಣಕಾಸು ಸಚಿವಾಲಯ (ಆರ್ಥಿಕ ವ್ಯವಹಾರಗಳ ಇಲಾಖೆ), ಭಾರತ ಸರ್ಕಾರ (1977 – 1980)
- ಗವರ್ನರ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (1982-1985)
- ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷ (1985-1987)
- ಪ್ರಧಾನ ಕಾರ್ಯದರ್ಶಿ, ದಕ್ಷಿಣ ಆಯೋಗ, ಜಿನೀವಾ (1987-1990)
- ಆರ್ಥಿಕ ವ್ಯವಹಾರಗಳ ಬಗ್ಗೆ ಭಾರತದ ಪ್ರಧಾನ ಮಂತ್ರಿಯ ಸಲಹೆಗಾರ (1990-1991)
- ಅಧ್ಯಕ್ಷರು, ವಿಶ್ವವಿದ್ಯಾಲಯ ಧನಸಹಾಯ ಆಯೋಗ (15 ಮಾರ್ಚ್ 1991 – 20 ಜೂನ್ 1991)
- ಭಾರತದ ಹಣಕಾಸು ಸಚಿವರು (21 ಜೂನ್ 1991 – 15 ಮೇ 1996)
- ರಾಜ್ಯಸಭೆಯ ಸಂಸತ್ ಸದಸ್ಯ (1 ಅಕ್ಟೋಬರ್ 1991 – 14 ಜೂನ್ 2019)
- ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ (ಭಾರತ) (1998-2004)
- ಭಾರತದ ಪ್ರಧಾನ ಮಂತ್ರಿ (22 ಮೇ 2004 – 26 ಮೇ 2014)
- ರಾಜ್ಯಸಭೆಯ ಸಂಸತ್ ಸದಸ್ಯ (19 ಆಗಸ್ಟ್ 2019 – 3 ಏಪ್ರಿಲ್ 2024)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post