ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಈ ವರ್ಷ ಗಣೇಶೋತ್ಸವ ಕೇವಲ ಒಂದೇ ಒಂದು ದಿನಕ್ಕೆ ಮಾತ್ರ ಸೀಮಿತ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಈ ಬಾರಿಯ ಗಣೇಶೋತ್ಸವ ಸರಳವಾಗಿ ಆಚರಿಸಿ ಎಂದು ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದು, ಮೆರವಣಿಗೆಯಲ್ಲಿ ಗಣಪತಿ ತರುವಂತಿಲ್ಲ-ವಿಸರ್ಜನೆ ಮಾಡುವಂತಿಲ್ಲ. ತಮ್ಮ ಜೀವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ಬಾರಿಯ ಗಣೇಶೋತ್ಸವ ಕೇವಲ ಒಂದೇ ಒಂದು ದಿನ ಮಾತ್ರ ಆಚರಣೆಗೆ ತೀರ್ಮಾನ ಮಾಡಲಾಗಿದೆ ಎಂದರು.
ಕರೆಂಟ್ ಮತ್ತು ಮೈಕ್’ಗೆ ಯಾವುದೇ ಪರ್ಮಿಷನ್ ನೀಡುವುದಿಲ್ಲ. ಬೆಳಿಗ್ಗೆ ಪ್ರತಿಷ್ಠಾಪನೆ ಮಾಡಬೇಕು, ಸಂಜೆ ಗಣಪತಿ ವಿಸರ್ಜನೆ ಮಾಡಬೇಕು. ಜಿಲ್ಲೆಯಲ್ಲಿ ಯಾರು ಎಲ್ಲಿ ಬೇಕಾದರೂ ಗಣೇಶನನ್ನು ಪ್ರತಿಷ್ಠಾಪನೆ ಮಾಡಿಕೊಳ್ಳಲಿ. ರಾಮಣ್ಣ ಶ್ರೇಷ್ಟಿ ಪಾರ್ಕ್, ಹಿಂದೂ ಮಹಾಸಭಾ ಗಣಪತಿ ಸೇರಿದಂತೆ, ಎಲ್ಲಾ ಗಣಪತಿಗಳಿಗೂ ಒಂದೇ ದಿನ ಇಡಲು ಅನುಮತಿ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದಿದ್ದಾರೆ.
ಅದೇ ರೀತಿ, ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಸಂಘಟನಾಕಾರರು, ಕಡಿಮೆ ಜನ ಸೇರಿ, ತಮ್ಮ ಜೀವವನ್ನ ಉಳಿಸಿಕೊಂಡು, ಮುಂದಿನ ವರ್ಷ ವಿಜೃಂಭಣೆಯಿಂದ ಗಣಪತಿ ಹಬ್ಬ ಆಚರಿಸಲು ತಯಾರಾಗಬೇಕು. ರಾಜ್ಯ ಸರ್ಕಾರ ತೀರ್ಮಾನದಂತೆ, ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನಕ್ಕೆ ಎಲ್ಲಾ ಗಣಪತಿ ಸಂಘಟನೆಗಳು ಬದ್ಧರಾಗಿರಬೇಕು ಎಂದರು.
ಗಣಪತಿ ಇಡಬೇಡಿ ಎಂದು ಜಿಲ್ಲಾಡಳಿತ ಹೇಳುತ್ತಿಲ್ಲ. ಯಾವ ಸಂಘಟನೆಯವರು ಕೂಡ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಪ್ರತಿಷ್ಠೆಯಾಗಿ ತೆಗೆದುಕೊಂಡರೆ, ನಮ್ಮ ಜೀವಕ್ಕೆ ಆಪತ್ತು ಉಂಟಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ, ಜಿಲ್ಲಾಡಳಿತದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಲೂ ಸಚಿವ ಈಶ್ವರಪ್ಪ ಮನವಿ ಮಾಡಿಕೊಂಡಿದ್ದಾರೆ.
Get In Touch With Us info@kalpa.news Whatsapp: 9481252093







Discussion about this post