No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭದ್ರಾವತಿ-ಶಿವಮೊಗ್ಗ ಜನರೇ, ಡಿ.14, 15 ನಿಮ್ಮೂರಿನಲ್ಲಿ ಈ ಕಾರ್ಯಕ್ರಮ ಮಿಸ್ ಮಾಡದೇ ನೋಡಿ

ಮಲೆನಾಡಿನ 2 ಕಡೆ ಆಳ್ವಾಸ್ ನುಡಿಸಿರಿ ವಿರಾಸತ್ | ದೇಶದ ಸಾಂಸ್ಕೃತಿಕ ಸೊಗಡಿನ ಅನಾವರಣ

kalpa News by kalpa News
December 13, 2025
in ಶಿವಮೊಗ್ಗ
0
ಭದ್ರಾವತಿ-ಶಿವಮೊಗ್ಗ ಜನರೇ, ಡಿ.14, 15 ನಿಮ್ಮೂರಿನಲ್ಲಿ ಈ ಕಾರ್ಯಕ್ರಮ ಮಿಸ್ ಮಾಡದೇ ನೋಡಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ #Alva’sEducationFoundation ನಡೆಯುವ ಆಳ್ವಾಸ್ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ವೈಭವ ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಕಡೆ ಪ್ರದರ್ಶನಗೊಳ್ಳಲಿದೆ.

ದೇಶದ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸುವ ಈ ಅಪರೂಪದ ಅದ್ದೂರಿ ಕಾರ್ಯಕ್ರಮ ಡಿ.14ರ ಭಾನುವಾರ ಭದ್ರಾವತಿ ಹಾಗೂ ಡಿ.15ರ ಸೋಮವಾರ ಶಿವಮೊಗ್ಗದಲ್ಲಿ ನಡೆಯಲಿದೆ.

ಡಿ.14ರ ಭಾನುವಾರ ಭದ್ರಾವತಿಯ #Bhadravathi ಕನಕ ಮಂಟಪ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಅದೇ ರೀತಿಯಲ್ಲಿ ಶಿವಮೊಗ್ಗದ #Shivamogga ಅಲ್ಲಮಪ್ರಭು ಮೈದಾನ(ಫ್ರೀಡಂ ಪಾರ್ಕ್)ನಲ್ಲಿ ನಡೆಯಲಿದೆ.

ಎರಡೂ ಕಡೆಗಳಲ್ಲಿ ಸಂಜೆ 5.45ಕ್ಕೆ ಆರಂಭಗೊಂಡು 45 ನಿಮಿಷದ ಸಭಾ ಕಾರ್ಯಕ್ರಮದ ನಂತರ ಸರಿಯಾಗಿ 6.30ಕ್ಕೆ ಆರಂಭಗೊಳ್ಳುವ ಸಾಂಸ್ಕೃತಿಕ ಪ್ರದರ್ಶನ 3 ಗಂಟೆಗಳ ಕಾಲ ನಡೆಯಲಿದೆ.ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ನಡೆಯಲಿದ್ದು, ಸಾರ್ವಜನಿಕರು 10 ನಿಮಿಷ ಮುಂಚಿತವಾಗಿಯೇ ಆಸೀನರಾಗಬೇಕು. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸುವ ಈ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷರಾದ ಡಾ.ಎಂ. ಮೋಹನ್ ಆಳ್ವ #DrMohanAlva ಕೋರಿದ್ದಾರೆ.

ಏನಿದು ಆಳ್ವಾಸ್ ಸಾಂಸ್ಕೃತಿಕ ವೈಭವ?
ಆಳ್ವಾಸ್ ಸಾಂಸ್ಕೃತಿಕ ವೈಭವ ಎನ್ನುವುದು ನಮ್ಮ ದೇಶದ ಸಾಂಸ್ಕೃತಿಕ ಸೊಗಡನ್ನು ಬಿಂಬಿಸುವ ಹಾಗೂ ಈ ಮೂಲಕ ಕಲೆ, ಸಂಗೀತ, ನೃತ್ಯ, ಯಕ್ಷಗಾನ ಸಂಸ್ಕೃತಿಯನ್ನು ಯುವ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮವಾಗಿದೆ. ಸುಮಾರು 500 ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸತತ ಮೂರು ಗಂಟೆಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಮ್ಮ ಪರಂಪರೆಯ ಶ್ರೇಷ್ಟ ಕಲಾ ಪ್ರಕಾರಗಳಾದ ಯೋಗ ದೀಪಿಕ, ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಯಕ್ಷಗಾನ-ಶ್ರೀರಾಮ ಪಟ್ಟಾಭಿಷೇಕ, ಗುಜರಾತಿನ ಗಾರ್ಭಮತ್ತು ದಾಂಡಿಯಾ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ರೋಪ್ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ನೃತ್ಯ-ವರ್ಷಧಾರೆ, ಪುರುಲಿಯಾ ತೆಂಕು ತಿಟ್ಟು ಯಕ್ಷಗಾನ-ಅಗ್ರಪೂಜೆ, ಬೊಂಬೆ ವಿನೋದಾವಳಿಗಳು ಅನಾವರಣಗೊಳ್ಳಲಿವೆ.
ಇನ್ನು, ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿದ್ದು, ಸಾರ್ವಜನಿಕರು 10 ನಿಮಿಷ ಮುಂಚಿತವಾಗಿಯೇ ಬಂದು ಆಸೀನರಾಗುವಂತೆ ವಿನಂತಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ತಿಂಡಿ-ತಿನಿಸುಗಳ ಸ್ಪಾಲ್’ಗಳನ್ನು ತೆರೆಯಲಾಗಿದೆ. ಈಗಾಗಲೇ ಹಲವು ಬಾರಿ ಶಿವಮೊಗ್ಗ ನಗರದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳು ನಡೆದಿವೆ. ಆದರೆ, ಇಷ್ಟು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿರುವುದು ಇದೇ ಮೊದಲು.

ಶಿವಮೊಗ್ಗದ ಮಟ್ಟಿಗೆ ಇದೊಂದು ಅಪರೂಪದ ಹಾಗೂ ಮಾಗಿಯ ಛಳಿಯಲ್ಲಿ ಬೆಚ್ಚಗಿನ ಕಾರ್ಯಕ್ರಮ. ವಿಶೇಷವೆಂದರೆ, ಈ ಕಾರ್ಯಕ್ರಮಕ್ಕೆ ನಗರದ ಮೂವತ್ತಕ್ಕೂ ಹೆಚ್ಚು ಸಮಾನ ಮನಸ್ಕ ಸಂಘ ಸಂಸ್ಥೆಗಳು ಕೈ ಜೋಡಿಸಿವೆ. ಈಗಾಗಲೇ ನಗರದ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಸಂಘ ಸಂಸ್ಥೆಗಳು, ವ್ಯಾಪಾರಸ್ಥರುಗಳಿಗೆ ವೈಯಕ್ತಿಕವಾಗಿ ಆಹ್ವಾನ ನೀಡಲಾಗಿದೆ. ಸರಿ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಸೇರುವ ನಿರೀಕ್ಷೆಯಿದ್ದು ಆಹ್ವಾನಿತ ಗಣ್ಯರಿಗೆ, ಸಾರ್ವಜನಿಕರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

https://kalpa.news/wp-content/uploads/2024/04/VID-20240426-WA0008.mp4

Tags: Alva's Nudisi VirasatAlvalsAlvas Education FoundationKannada News WebsiteLatest News KannadaShimogaShivamoggaShivamogga Newsಆಳ್ವಾಸ್ ನುಡಿಸಿರಿ ವಿರಾಸತ್ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಕ್ಷಿಣ ಕನ್ನಡಭದ್ರಾವತಿಮೂಡುಬಿದರೆಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ದುಡಿಮೆಯಲ್ಲಿನ ಸ್ವಲ್ಪ ಹಣವನ್ನು ದಾನ ಮಾಡುವುದು ಅತ್ಯಂತ ಶ್ರೇಷ್ಠ

Next Post

ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್’ಪಿ ಹೇಳಿದ್ದೇನು?

kalpa News

kalpa News

Next Post
ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್’ಪಿ ಹೇಳಿದ್ದೇನು?

ಭದ್ರಾವತಿ ಡಬಲ್ ಮರ್ಡರ್ | ಐವರು ಅಂದರ್ | ಹತ್ಯೆಗೆ ಕಾರಣವೇನು? ಎಸ್'ಪಿ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL