ಕಲ್ಪ ಮೀಡಿಯಾ ಹೌಸ್ | ಅಮರಾವತಿ |
ಆಂಧ್ರಪ್ರದೇಶದ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿದಂತೆ 4 ಮಂದಿ ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ಮೃತರನ್ನು ಜೈನಬಿ (60), ದಾದು (36), ಶರ್ಫುನ್ನಿ (28) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಪೋಟದ ತೀವ್ರತೆಗೆ ಅಕ್ಕಪಕ್ಕದ ಎರಡು ಮನೆಗಳಿಗೂ ಹಾನಿಯಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post