ಕಲ್ಪ ಮೀಡಿಯಾ ಹೌಸ್ | ಅಮರಾವತಿ |
ಗುಂಟೂರು ನಗರದಲ್ಲಿ ಸಂಕ್ರಾಂತಿ ಕಣ ವಿತರಿಸುತ್ತಿದ್ದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂರು ಮಹಿಳೆಯರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಘಟನೆ ಕುರಿತಂತೆ ಮಾತನಾಡಿರುವ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಸರ್ಕಾರವೇ ಹೊಣೆಯಾಗಿದೆ ಎಂದು ಕಿಡಿ ಕಾರಿದ್ದಾರೆ.
ನಾಯ್ಡು ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರೆ, ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.
Also read: ಮರಕ್ಕೆ ಕಟ್ಟಿಹಾಕಿ ಹಸುವಿನ ಕರು ಮೇಲೆ ಅತ್ಯಾಚಾರ: ಆರೋಪಿ ಇಮ್ತಿಯಾಜ್ ಬಂಧನಮರಕ್ಕೆ ಕಟ್ಟಿಹಾಕಿ ಹಸುವಿನ ಕರು ಮೇಲೆ ಅತ್ಯಾಚಾರ: ಆರೋಪಿ ಇಮ್ತಿಯಾಜ್ ಬಂಧನ
ಇಲ್ಲಿನ ಸಾರ್ವಜನಿಕ ಮೈದಾನದಲ್ಲಿ ಸರ್ಕಾರೇತರ ಸಂಸ್ಥೆಯು ಬಡ ಕುಟುಂಬಗಳಿಗೆ ‘ಸಂಕ್ರಾಂತಿ ಕಣ’ (ಉಡುಗೊರೆ) ವಿತರಿಸಿಸುತ್ತಿದ್ದ ಕೆಲವು ಸ್ಟಾಲ್’ಗಳಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಮೂವರು ಮಹಿಳೆಯರು ಮೃತಪಟ್ಟಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















