ಕಲ್ಪ ಮೀಡಿಯಾ ಹೌಸ್ | ಅಂಬಾಲಾ(ಹರಿಯಾಣ) |
16 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಪೊಲೀಸರು ಬಂಧಿಸಿದ್ದು, ಕಳೆದ ಎರಡು ವರ್ಷಗಳಲ್ಲಿ ಪತಿ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಮ್ಮೆ ತನ್ನ ಪತಿ ಅಪ್ರಾಪ್ತ ಬಾಲಕಿಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತಡೆದಿದ್ದೆ ಹಾಗೂ ಮಗಳೊಂದಿಗೆ ತನ್ನ ಸ್ವಗ್ರಾಮದಿಂದ ಅಂಬಾಲಾಕ್ಕೆ ಹಿಂದಿರುಗಿದಾಗ, ಆರೋಪಿಯು ಮತ್ತೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬ ಮೂಲತಃ ಬಿಹಾರದವರಾಗಿದ್ದು, ಕಳೆದ ಹಲವು ವರ್ಷಗಳಿಂದ ಈ ಕುಟುಂಬ ಅಂಬಾಲಾ ನಗರದಲ್ಲಿ ನೆಲೆಸಿದೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿ ತಂದೆ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Also read: ಚುನಾವಣಾ ಕಣಕ್ಕೆ ನಟ ಸುದೀಪ್! ಅಭಿಮಾನಿಗಳಿಗೆ ಕಿಚ್ಚನ ಸ್ಪಷ್ಟನೆ ಏನು? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post