ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾವು ಗೌರವಿಸುತ್ತೇವೆ ಎಂದು ಅಮೆರಿಕಾ ಉನ್ನತ ರಾಯಭಾರಿ ಕಚೇರಿ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಅಮೆರಿಕಾ ರಾಯಭಾರಿ ಕಚೇರಿಯ ಅಧಿಕಾರಿ ಮೈಕ್ ಪೊಂಪಿಯೋ, ಪ್ರತಿಯೊಂದು ಕಡೆಯಲ್ಲಿಯೂ ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಲ್ಪಸಂಖ್ಯಾತರ ರಕ್ಷಣೆಯನ್ನು ಕಾಪಾಡಲು ನಾವು ಆದ್ಯತೆ ನೀಡುತ್ತೇವೆ. ಭಾರತದ ಪ್ರಜಾಪ್ರಭುತ್ವವನ್ನು ನಾವು ಗೌರವಿಸುತ್ತೇವೆ ಎಂದಿದ್ದಾರೆ.
ಒಂದೆಡೆ ಭಾರತದಲ್ಲಿ ಪೌರತ್ವ ಹಾಗೂ ಧಾರ್ಮಿಕ ಸ್ವಾತಂತ್ರದ ಬಗ್ಗೆ ಚರ್ಚೆ-ಪ್ರತಿಭಟನೆ ನಡೆಯುತ್ತಿರುವ ವೇಳೆಯಲ್ಲಿಯೇ ಅಮೆರಿಕಾದ ಈ ಹೇಳಿಕೆ ದೇಶಕ್ಕೆ ನೈತಿಕ ಬೆಂಬಲವನ್ನು ನೀಡಿದೆ.
Get in Touch With Us info@kalpa.news Whatsapp: 9481252093
















