ಕಲ್ಪ ಮೀಡಿಯಾ ಹೌಸ್
ಅಮೇಥಿ: ಯುವಕನೋರ್ವ 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನಗಳ ಕಾಲ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ.
ಜುಲೈ 9ರಂದು ಬಾಲಕಿ ಮನೆಯ ಸಮೀಪದಲ್ಲಿರುವ ಕೊಳವೆ ಬಾವಿಯಿಂದ ನೀರು ತರಲೆಂದು ಹೋಗಿದ್ದ ವೇಳೆ ಆಕೆಯನ್ನು ಯುವಕ ಅಪಹರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

5 ದಿನಗಳ ಕಾಲ ನಿರಂತರ ಅತ್ಯಾಚಾರವೆಸಗಿದ ನಂತರ ಬಾಲಕಿ ಹೇಗೋ ಕಾಮುಕ ಯುವಕನಿಂದ ತಪ್ಪಿಸಿಕೊಂಡು ಬಂದಿದ್ದಾಳೆ, ನಡೆದ ಘಟನೆಯನ್ನು ಕುಟುಂಬಸ್ಥರಿಗೆ ತಿಳಿಸಿದ ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















