ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ನಗರದಲ್ಲಿ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.
ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಪ್ರಾಂಗಣದಲ್ಲಿರುವ ನಾಗದೇವರ ಸನ್ನಿಧಿಯಲ್ಲಿ ಮುಂಜಾನೆಯಿಂದಲೇ ಭಕ್ತರು ಸ್ವಾಮಿಗೆ ತನಿ ಎರೆದು ಪೂಜೆ ಸಲ್ಲಿಸುತ್ತಿದ್ದರು.
ಭದ್ರೆಯ ತಟದ ರಾಮೇಶ್ವರ ದೇವಾಲಯಲ್ಲಿರುವ ಸುಬ್ರಹ್ಮಣ್ಯ ಸ್ವಾಮಿಗೆ ಮುಂಜಾನೆಯೇ ವಿಶೇಷ ಅಭಿಶೇಕ, ಪೂಜೆ ಹಾಗೂ ಅಲಂಕಾರ ಮಾಡಲಾಗಿತ್ತು. ದೇವಾಲಯದ ಪ್ರಾಂಗಣದಲ್ಲಿರುವ ನಾಗರ ಕಲ್ಲಿಗೆ ಭಕ್ತರು ಸರತಿ ಸಾಲಿನಲ್ಲಿ ನಿಂತು, ಸಾಮಾಜಿಕ ಅಂತರ ಕಾಯ್ದುಕೊಂಡೇ ಪೂಜೆ ಸಲ್ಲಿಸಿದ್ದು ವಿಶೇವಾಗಿತ್ತು.
ಇನ್ನು, ನಗರಕ್ಕೆ ಸಮೀಪದ ಸುಣ್ಣದಹಳ್ಳಿ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿರುವ ನಾಗ ದೇವರಿಗೆ ಮುಂಜಾನೆ ವಿಶೇಷ ಪೂಜೆ ಪುನಸ್ಕಾರಗಳನ್ನು ನಡೆಸಿ, ವಿಶೇಷ ಅಲಂಕಾರ ಮಾಡಲಾಗಿತ್ತು.
ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ದೇವಾಲಯದ ಅರ್ಚಕರು ಹಾಗೂ ಸಿಬ್ಬಂದಿಗಳು ಭಕ್ತರಿಗೆ ಹೇಳುತ್ತಿದ್ದುದು ಕಂಡು ಬಂದಿತು.
ಕೊರೋನಾ ಹಾವಳಿಯಿದ್ದರೂ ನಗರದಲ್ಲಿ ನಾಗ ದೇವರ ಸನ್ನಿಧಾನ ಇರುವ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಪ್ರತಿವರ್ಷಕ್ಕೆ ಹೋಲಿಕೆ ಮಾಡಿದರೆ ಅಂತಹ ವ್ಯತ್ಯಾಸವೇನೂ ಇರಲಿಲ್ಲ ಎಂದೇ ಹೇಳಬೇಕು. ಆದರೆ, ಬಹಳಷ್ಟು ಮಂದಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡೇ ಪೂಜೆ ಸಲ್ಲಿಸಿದ್ದು ಕಂಡು ಬಂದಿತು.
Get In Touch With Us info@kalpa.news Whatsapp: 9481252093
Discussion about this post