ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್’ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಕೂಗಿದ ಅಮೂಲ್ಯಳನ್ನು ಬೆಂಗಳೂರು ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ.
ಸಿಎಎ ವಿರೋಧಿಸಿ ಟಿಪ್ಪು ಸುಲ್ತಾನ್ ಯನೈಟೆಡ್ ಫ್ರೆಂಟ್ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆಯೇರಿ ಮಾತು ಆರಂಭಿಸಿದ ಅಮೂಲ್ಯ, ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ. ತತಕ್ಷಣವೇ ಎಚ್ಚೆತ್ತ ಪೊಲೀಸರು ಆಕೆಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದಿದ್ದಾರೆ.
#WATCH The full clip of the incident where a woman named Amulya at an anti-CAA-NRC rally in Bengaluru raised slogan of 'Pakistan zindabad' today. AIMIM Chief Asaddudin Owaisi present at rally stopped the woman from raising the slogan; He has condemned the incident. pic.twitter.com/wvzFIfbnAJ
— ANI (@ANI) February 20, 2020
ಈ ಕುರಿತಂತೆ ಸಭೆಯಲ್ಲಿ ಹಾಜರಿದ್ದ ಸಂಸದ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯಿಸಿ, ಈ ರೀತಿ ಘೋಷಣೆ ಕೂಗಬಾರದಿತ್ತು. ಇದನ್ನು ನಾವು ಖಂಡಿಸುತ್ತೇವೆ ಎಂದು ಸಮಜಾಯಿಷಿ ನೀಡಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post