ಕಲ್ಪ ಮೀಡಿಯಾ ಹೌಸ್ | ಅಮೃತಸರ |
ನಕಲಿ ಮದ್ಯ ಸೇವಿಸಿ 15 ಜನರು ಸಾವನ್ನಪ್ಪಿ, 10 ಜನರು ಗಂಭೀರವಾಗಿರುವ ಘಟನೆ ಪಂಜಾಬ್‌ನ ಅಮೃತಸರದ ಮಜಿತಾ ಪ್ರದೇಶದ ಐದು ಹಳ್ಳಿಗಳಲ್ಲಿ ನಡೆದಿದೆ.
ನಿನ್ನೆ ರಾತ್ರಿ 9:30ರ ಸುಮಾರಿಗೆ ನಕಲಿ ಮದ್ಯ ಸೇವಿಸಿದ ನಂತರ ಜನರು ಅಸ್ವಸ್ಛರಾಗಿದ್ದು ಹಲವರು ಸಾವನ್ನಪ್ಪಿಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಅಮೃತಸರ (ಗ್ರಾಮೀಣ) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಣೀಂದರ್ ಸಿಂಗ್ ಹೇಳಿದ್ದಾರೆ.

ನಕಲಿ ಮದ್ಯ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದವರನ್ನು ಅಮೃತಸರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದ್ದು, ಭಂಗಲಿ, ಪಾತಾಳಪುರಿ, ಮರಾರಿ ಕಲಾನ್, ಥೆರೆವಾಲ್ ಮತ್ತು ತಲ್ವಾಂಡಿ ಘುಮಾನ್ ಎಂಬ ಐದು ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ.










Discussion about this post