ಕಲ್ಪ ಮೀಡಿಯಾ ಹೌಸ್ | ಅಮೃತಸರ |
ಪಂಜಾಬ್ನ ತರ್ನ್ ತರನ್ ಜಿಲ್ಲೆಯ ಅಮೃತಸರ-ಭಟಿಂಡಾ ಹೆದ್ದಾರಿಯಲ್ಲಿರುವ ಸರ್ಹಾಲಿ ಪೊಲೀಸ್ ಠಾಣೆ ಮೇಲೆ ಶುಕ್ರವಾರ ಮಧ್ಯರಾತ್ರಿ ಶಂಕಿತ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದೆ.
ರಾಕೆಟ್ ದಾಳಿಯಿಂದಾಗಿ ಪೊಲೀಸ್ ಠಾಣೆಯ ಗೋಡೆಗಳು, ಬಾಗಿಲುಗಳ ಗಾಜುಗಳು ಒಡೆದು ಹೋಗಿವೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಸ್ಪೋಟಕ ಅಪ್ಪಳಿಸಿದ್ದು, ದುಷ್ಕೃತ್ಯದ ಹಿಂದೆ ಪಾಕಿಸ್ತಾನಿ ಉಗ್ರರ ಕೈವಾಡವಿದೆ ಎಂದು ಶಂಕಿಸಲಾಗಿದೆ.
ಅಪರಿಚಿತ ದಾಳಿಕೋರರು ರಾಕೆಟ್ ಲಾಂಚರ್ ತರಹದ ಸಾಧನವನ್ನು ರಾಷ್ಟ್ರೀಯ ಹೆದ್ದಾರಿ 54ರಿಂದ ಸರ್ಹಾಲಿಯ ಪೊಲೀಸ್ ಠಾಣೆಗೆ ಹಾರಿಸಿದ್ದಾರೆ ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Also read: ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ
ತರ್ನ್ ತರನ್ನ ಎಸ್‌ಎಸ್‌ಪಿ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾಳಿಗೆ ಬಳಸಿದ ರಾಕೆಟ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಐಎಸ್‌ಐ ಆಶ್ರಯದ ಖಲಿಸ್ತಾನ್ ಬೆಂಬಲಿತ ಭಯೋತ್ಪಾದಕರು ಈ ದಾಳಿಯನ್ನು ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post