ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ #KuvempuUniversity 33ನೆಯ ಘಟಿಕೋತ್ಸವ ಜುಲೈ 22ರಂದು ನಡೆಯಲಿದ್ದು, ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ #HonoraryDoctorate ಪ್ರದಾನ ಮಾಡಲಾಗುತ್ತಿದೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಗಣ್ಯರನ್ನು ಗುರುತಿಸಿ ಈ ಬಾರಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದು ಈ ಸಾಧಕರ ಕುರಿತಾಗಿನ ಮಾಹಿತಿ ಇಲ್ಲಿದೆ.

ಮೂಲತಃ ಉಡುಪಿ #Udupi ಮೂಲದ ಸದಾನಂದಶೆಟ್ಟಿ, ಶಿಕ್ಷಣ ತಜ್ಞರು ಮತ್ತು ಕ್ರೀಡಾ ಆಡಳಿತಗಾರರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿಯವಾಗಿರುವ ಶ್ರೀದೇವಿ ಶಿಕ್ಷಣ ಟ್ರಸ್ಟ್ ಸ್ಥಾಪಕರು. ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.
Also Read: ಮಾಜಿ ಸಿಎಂ ಬಿಎಸ್’ವೈ ಇನ್ಮುಂದೆ ಡಾ.ಬಿ.ಎಸ್. ಯಡಿಯೂರಪ್ಪ
ಪಂಡಿತ್ ರಾಜಗುರು ಗುರುಸ್ವಾಮಿ ಕಲಿಕೇರಿ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರ
ಮೂಲತಃ ಬಿಜಾಪುರ ಜಿಲ್ಲೆಯ ಕಲಿಕೇರಿ ಗ್ರಾಮದವರು. ಗಾನಭಾರತಿ, ಭಾವ ಭಗವದ್ಗೀತೆ ಮತ್ತಿತರ ಕವನ ಸಂಕಲನಗಳು, ಚಿನ್ಮಯ, ಮೌನ ತಪಸ್ವಿ ಕಾದಂಬರಿ, 21 ಷಟ್ಪದಿ ಕಾವ್ಯಗಳನ್ನು ಪ್ರಕಟಿಸಿದ್ದಾರೆ.

ಎಂ. ಚಂದ್ರಪ್ಪ, ಗ್ರಾಮೀಣಾಭಿವೃದ್ಧಿ ಕ್ಷೇತ್ರ
ಮೂಲತಃ ದಾವಣಗೆರೆ ಜಿಲ್ಲೆಯ ಇವರು, ರಾಜಕಾರಣಿ ಮತ್ತು ಹಲವು ಶಿಕ್ಷಣ ಸಂಸ್ಥೆಗಳ ಸ್ಥಾಪಕರು. ಚಿತ್ರದುರ್ಗ ಜಿಲ್ಲೆಯ ದೇವರಾಜ್ ಅರಸ್ ಶಿಕ್ಷಣ ಸಮೂಹದ ಸ್ಥಾಪಕರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಾಸಕಾಂಗ ಸಮಿತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿರುತ್ತಾರೆ. ಇವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕೆಲಸಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post