ಕಲ್ಪ ಮೀಡಿಯಾ ಹೌಸ್ | ಆನಂದಪುರಂ |
ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ ಗೌಡ ಎಂದು ಗುರುತಿಸಲಾಗಿದೆ.
ಆನಂದಪುರಂನ ಮೆಣಸಿನಸರ ಮತ್ತು ಕೈಮರದ ನಡುವೆ ಈ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಅವರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮೂರು ವರ್ಷದ ಹಿಂದೆ ಬನವಾಸಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಜುನಾಥ್ ಅವರ ಪತ್ನಿ ಮೃತಪಟ್ಟಿದ್ದರು.
ಮದುವೆ ಮನೆಯಲ್ಲಿ ಸೂತಕದ ಛಾಯೆ
ಮೃತ ಮಂಜುನಾಥ ಗೌಡ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇಬ್ಬರ ಮದುವೆಯು ಇಂದು ನಿಗದಿಯಾಗಿತ್ತು. ಈ ಹಿನ್ನೆಲೆ ಮದುವೆ ಕಾರ್ಯದ ಅಂತಿಮ ಸಿದ್ಧತೆ ನಡೆಸುತ್ತಿದ್ದರು. ಕಾರ್ಯಕ್ರಮಕ್ಕೆ ಬೇಕಾದ ಸಾಮಗ್ರಿ ಖರೀದಿಸಲು ಅವರು ಮಂಗಳವಾರ ಆನಂದಪುರಂಗೆ ತೆರಳಿದ್ದರು. ಅಲ್ಲಿಂದ ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ.
Also read: ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಇಬ್ಬರು ಕೂಲಿ ಕಾರ್ಮಿಕರ ಸಾವು
ಮನೆಯಲ್ಲಿ ಸೂತಕ ಆವರಿಸಿದ ಹಿನ್ನೆಲೆಯಲ್ಲಿ ಮಕ್ಕಳ ಮದುವೆ ನಡೆಸುವ ಬಗ್ಗೆ ಗೊಂದಲ ಏರ್ಪಟ್ಟಿತ್ತು. ಆದರೆ, ಬಂಧು ಬಾಂಧವರು ಚರ್ಚಿಸಿ ಮಕ್ಕಳ ಮದುವೆಯನ್ನು ನಿಗದಿಯಂತೆ ಮಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post