ಕಲ್ಪ ಮೀಡಿಯಾ ಹೌಸ್ | ಆನಂದಪುರ |
ಖಾಸಗಿ ಬಸ್ಸು ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಬಳಿ ಸೋಮವಾರ (ಆ.18) ಸಂಜೆ ಸಂಭವಿಸಿದೆ.
ಬಂಗಾರಪ್ಪ ಗಂಭೀರ ಗಾಯಗೊಂಡಿರುವ ವ್ಯಕ್ತಿ. ಸೋಮವಾರ ಸಂಜೆ ಬಂಗಾರಪ್ಪ ಅವರು ಐಗಿನ ಬೈಲು ಕಡೆಯಿಂದ ಹೊಸೂರಿಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸೂರು ಬಳಿ ಢಿಕ್ಕಿ ಹೊಡೆದಿದೆ ಪರಿಣಾಮ ಬಂಗಾರಪ್ಪ ಅವರ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.
ಇದೇ ವೇಳೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಸಹಾಯಕ ಪೃಥ್ವಿರಾಜ್ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೇಳೆ ಅಪಘಾತದಿಂದ ರಸ್ತೆ ಬದಿ ಬಿದ್ದಿದ್ದ ಬಂಗಾರಪ್ಪನವರನ್ನು ತಮ್ಮ ವಾಹನದಲ್ಲಿ ಆನಂದಪುರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post