ಕಲ್ಪ ಮೀಡಿಯಾ ಹೌಸ್ | ಆನವಟ್ಟಿ |
ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಗಾಂಜಾ #Ganja ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಗಾಂಜಾ ಹಾವಳಿ ನಿಯಂತ್ರಿಸಲು ಪೊಲೀಸರು ಸತತ ಕಾರ್ಯಾಚರಣೆ ನಡೆಸುತ್ತಿದ್ದು, ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ರೋಹಿತ್ ಎಂಬಾತನನ್ನು ಬಂಧಿಸಿ ಆತನಿಂದ ಸುಮಾರು 45 ಸಾವಿರ ರೂಪಾಯಿ ಮೌಲ್ಯದ 1 ಕೆ.ಜಿ. 132 ಗ್ರಾಂ ತೂಕದ ಗಾಂಜಾ, 550 ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 14ರ ಶನಿವಾರದಂದು ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೊರವಲಯದಲ್ಲಿ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ತಂಡವು ಸ್ಥಳಕ್ಕೆ ದಾಳಿ ನಡೆಸಿ, ಮಾರಾಟ ಜಾಲದಲ್ಲಿ ತೊಡಗಿದ್ದ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಆರೋಪಿ ವಿರುದ್ಧ ಎನ್.ಡಿ.ಪಿ.ಎಸ್. (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇತರ ಆರೋಪಿಗಳ ಬಗ್ಗೆ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















