No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

‘ಅಮ್ಮ… ನಾನ್ನ’! ಅಪ್ಪನ ಸ್ಕೂಟರ್ ತಬ್ಬಿ ಅಳುತ್ತಾ ನಿಂತ 3 ವರ್ಷದ ಮಗು | ನದಿಗೆ ಹಾರಿದ ಅಪ್ಪ-ಅಮ್ಮ

kalpa News by kalpa News
August 29, 2026
in ರಾಷ್ಟ್ರೀಯ
0
Andra Pradesh Parents Jump In River 3 Years Child Alone
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪಶ್ಚಿಮ ಗೋದಾವರಿ  |

ಮೂರು ವರ್ಷದ ಮಗುವನ್ನು ಸೇತುವೆ ಮೇಲೆಯೇ ಬಿಟ್ಟು ದಂಪತಿಯೊಂದು ಉಕ್ಕಿ ಹರಿಯುತ್ತಿದ್ದ ಗೋದಾವರಿ ನದಿಗೆ (Godavari River) ಹಾರಿದ್ದಾರೆ ಎನ್ನಲಾದ ದಾರುಣ ಘಟನೆ ಆಂಧ್ರಪ್ರದೇಶದ (Andra Pradesh) ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಆಘಾತ ಮೂಡಿಸಿದೆ.

ಚಿಂಚಿನಾಡ ವಸಿಷ್ಠ ಸೇತುವೆ ಬಳಿ ಈ ಘಟನೆ ನಡೆದಿದೆ. ವೆಲ್ಪೂರು ಗ್ರಾಮದ ನಿವಾಸಿಗಳಾದ ದೊಡ್ಡ ಸಾಯಿ (29) ಮತ್ತು ಅವರ ಪತ್ನಿ ಶಿರೀಷಾ (28) ನದಿಗೆ ಹಾರಿದ್ದಾರೆ ಎನ್ನಲಾಗಿದೆ. ದಂಪತಿಯ ಮೂರು ವರ್ಷದ ಪುತ್ರನನ್ನು ಸೇತುವೆ ಮೇಲಿರುವ ಸ್ಕೂಟರ್‌ನಲ್ಲೇ ಬಿಟ್ಟು ಅವರು ನದಿಗೆ ಹಾರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾತ್ರಿ 10ರ ಸುಮಾರಿಗೆ ಸೇತುವೆಗೆ ಆಗಮಿಸಿದ್ದ ದಂಪತಿ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಗುರುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಸಾಯಿ ಹಾಗೂ ಶಿರೀಷಾ ತಮ್ಮ ಮೂರು ವರ್ಷದ ಮಗುವಿನೊಂದಿಗೆ ಸ್ಕೂಟರ್‌ನಲ್ಲಿ ಚಿಂಚಿನಾಡ ವಸಿಷ್ಠ ಸೇತುವೆಗೆ ಆಗಮಿಸಿದ್ದರು. ಬಳಿಕ ಅವರು ಮಗುವನ್ನು ಸ್ಕೂಟರ್ ಬಳಿ ಬಿಟ್ಟು, ಉಕ್ಕಿ ಹರಿಯುತ್ತಿದ್ದ ಗೋದಾವರಿ ನದಿಗೆ ಹಾರಿದ್ದಾರೆ ಎನ್ನಲಾಗಿದೆ.Kumadvathi College Shikariura

ರಾತ್ರಿ ವೇಳೆ ಸೇತುವೆ ಮೇಲೆ ಮಗು ಒಂಟಿಯಾಗಿ ಅಳುತ್ತಿರುವುದನ್ನು ಗಮನಿಸಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಳಿ ಹಾಗೂ ಕತ್ತಲಿನ ನಡುವೆ ಮಗು ಆತಂಕದಿಂದ ಅಳುತ್ತಾ “ಅಮ್ಮ… ನಾನ್ನ” (ಅಮ್ಮ… ಅಪ್ಪ) ಎಂದು ಕರೆಯುತ್ತಿದ್ದುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಮಗುವಿನ ಪೋಷಕರು ಸ್ಥಳದಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಪೊಲೀಸರು ಪರಿಶೀಲನೆ ನಡೆಸಿದಾಗ, ದಂಪತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

Also Read>> ಮೈಸೂರು | ಆ. 30ರಂದು ರಾಯರ ಮಠದಲ್ಲಿ ಭಾನುವಾರ ಕೌಸಲ್ಯಾ- ಅಪ್ರಮೇಯ ಕಛೇರಿ

ಮಗುವನ್ನು ರಕ್ಷಿಸಿದ ಪೊಲೀಸರು

ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ, ದಂಪತಿ ಬಂದಿದ್ದ ಸ್ಕೂಟರ್‌ನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ನಂತರ ಮಗುವನ್ನು ಕುಟುಂಬದ ಸದಸ್ಯರ ವಶಕ್ಕೆ ಒಪ್ಪಿಸಲಾಗಿದೆ. ಇದೇ ವೇಳೆ ದಂಪತಿಯನ್ನು ಪತ್ತೆಹಚ್ಚಲು ಗೋದಾವರಿ ನದಿಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು.

Andra Pradesh : ನದಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ

ಪೊಲೀಸರ ನೇತೃತ್ವದಲ್ಲಿ ಸ್ಥಳೀಯ ರಕ್ಷಣಾ ಸಿಬ್ಬಂದಿ, ಈಜುಗಾರರು ಹಾಗೂ ಬೋಟ್ ತಂಡಗಳು ನದಿಯಲ್ಲಿ ಶೋಧ ನಡೆಸುತ್ತಿವೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಗೆ ಸವಾಲು ಎದುರಾಗಿದೆ ಎನ್ನಲಾಗಿದೆ.

ವರದಿ ಸಿದ್ಧವಾಗುವ ವೇಳೆಗೆ ದಂಪತಿಯ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.PES Shivamogga

ಸಾಲದ ಒತ್ತಡವೇ ಕಾರಣವೇ?

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸಾಯಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಈ ಹಿಂದೆ ಕೆಲಕಾಲ ಗಲ್ಫ್ ರಾಷ್ಟ್ರದಲ್ಲಿಯೂ ಕೆಲಸ ಮಾಡಿದ್ದ ಎಂಬ ಮಾಹಿತಿ ದೊರೆತಿದೆ. ಇತ್ತೀಚಿನ ದಿನಗಳಲ್ಲಿ ಅವರು ಸಾಲ ಹಾಗೂ ಆರ್ಥಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ದಂಪತಿ ತಮ್ಮ ಮನೆಯನ್ನು ಮಾರಾಟ ಮಾಡಲು ಮುಂದಾಗಿದ್ದರು ಎಂಬ ಮಾಹಿತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಆರ್ಥಿಕ ಒತ್ತಡವೇ ದಂಪತಿ ಇಂತಹ ನಿರ್ಧಾರ ಕೈಗೊಳ್ಳಲು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಆದರೆ ಆರ್ಥಿಕ ಸಂಕಷ್ಟವೇ ಘಟನೆಗೆ ಏಕೈಕ ಕಾರಣ ಎಂದು ಪೊಲೀಸರು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ದಂಪತಿ ನದಿಗೆ ಹಾರಲು ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ದಂಪತಿಯ ಹಿನ್ನೆಲೆ, ಆರ್ಥಿಕ ಪರಿಸ್ಥಿತಿ ಹಾಗೂ ಘಟನೆಗೂ ಮುನ್ನ ನಡೆದ ಬೆಳವಣಿಗೆಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

Andra Pradesh : Couple Allegedly Jumps Into Godavari River, Leaves 3-Year-Old Child Alone on Bridge

West Godavari: A tragic incident has been reported from West Godavari district of Andhra Pradesh, where a couple allegedly jumped into the swollen Godavari River after leaving their three-year-old child alone on a bridge late Thursday night. The incident has shocked locals and raised concerns over the safety of the child.

The incident occurred near the Chinchinada Vasishta Bridge. The couple, identified as Dodda Sai (29) and his wife Shireesha (28), were residents of Velpuru village. According to police, the couple allegedly left their three-year-old son on a scooter parked on the bridge before jumping into the river.

Couple Reached Bridge Around 10 pm

According to preliminary investigations, Sai and Shireesha arrived at the Chinchinada Vasishta Bridge on a scooter with their three-year-old son at around 10 pm on Thursday.

The couple allegedly left the child near the scooter and then jumped into the swollen Godavari River. The child was left alone on the bridge in the dark and cold.

Passersby noticed the child crying and alerted the police. The boy was reportedly calling out “Amma… Nanna” (Mother… Father) in distress. Locals soon realised that the child’s parents were missing and informed the authorities.Kalahamsa Infotech private limited

Police Rescue Child

Police rushed to the spot after receiving the information and took the three-year-old into their care. The scooter used by the couple was also secured as part of the investigation.

The child was later handed over to family members. Meanwhile, a search operation was launched in the Godavari River to trace the missing couple.

Search Operation Underway

Police, along with local rescuers, swimmers and boat teams, launched an intensive search operation in the river.

The rising water level and strong current in the Godavari have made the search operation challenging. Efforts to locate Sai and Shireesha were continuing at the time of reporting.

Financial Distress Suspected

Preliminary investigations have revealed that Sai worked as a driver and had also spent some time working in a Gulf country before returning to Andhra Pradesh.

Police suspect that he had been facing mounting debts and financial pressure in recent days. Investigators are also looking into reports that the couple had been planning to sell their house due to financial difficulties.

However, police have not officially confirmed financial distress as the sole reason behind the incident. The exact circumstances that led to the couple allegedly jumping into the river remain under investigation.

Police have registered a case and are examining the couple’s financial background, personal circumstances and events leading up to the incident. Further details are expected as the investigation and search operation continue.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising Disclaimer

Tags: Andra PradeshChinchinada Vasishtha BridgeGodavari Riverಆಂಧ್ರಪ್ರದೇಶಗೋದಾವರಿ ನದಿಚಿಂಚಿನಾಡ ವಸಿಷ್ಠ ಸೇತುವೆಪಶ್ಚಿಮ ಗೋದಾವರಿ
Share243Tweet152Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಆ. 30ರಂದು ರಾಯರ ಮಠದಲ್ಲಿ ಭಾನುವಾರ ಕೌಸಲ್ಯಾ- ಅಪ್ರಮೇಯ ಕಛೇರಿ

Next Post

ಬೆಂಗಳೂರು | ತ್ಯಾಗರಾಜನಗರ ರಾಯರ ಮಠದಲ್ಲಿ ಆರಾಧನಾ ಮಹೋತ್ಸವ

kalpa News

kalpa News

Next Post
Bangalore Rayara Aradhana In Tyagarajanagara Matha

ಬೆಂಗಳೂರು | ತ್ಯಾಗರಾಜನಗರ ರಾಯರ ಮಠದಲ್ಲಿ ಆರಾಧನಾ ಮಹೋತ್ಸವ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL