ಕಲ್ಪ ಮೀಡಿಯಾ ಹೌಸ್ | ಅಮರಾವತಿ |
ರಾಜ್ಯದ ಹಿಂದಿನ ವೈಎಸ್’ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿರುಪತಿ ಲಾಡು ತಯಾರಿಸಲು ತುಪ್ಪದ ಬದಲಾಗಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಕುರಿತಂತೆ ಸ್ವತಃ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರದ ಮೇಲೆ ಆರೋಪ ಹೊರಿಸಿದ್ದಾರೆ.
ಅಮರಾವತಿಯಲ್ಲಿ ನಡೆದ ಎನ್’ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಈ ಹಿಂದೆ ವೈಎಸ್’ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿಯಲ್ಲಿ ತಯಾರಾಗುತ್ತಿದ್ದ ಲಡ್ಡುಗಳಿಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ. ಅಲ್ಲದೆ ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿ ಲಡ್ಡುಗಳನ್ನು ತಯಾರು ಮಾಡಲಾಗಿತ್ತು. ಆದರೆ ನಮ್ಮ ಸರಕಾರ ಬಂದ ಬಳಿಕ ಈಗ ಶುದ್ಧ ತುಪ್ಪವನ್ನು ಬಳಸಲಾಗುತ್ತಿದ್ದು, ದೇವಸ್ಥಾನದಲ್ಲಿ ಎಲ್ಲವನ್ನೂ ಸ್ವಚ್ಛಗೊಳಿಸಲಾಗಿದೆ. ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ.
ಇನ್ನು, ಈ ಆರೋಪವನ್ನು ತಳ್ಳಿ ಹಾಕಿರುವ ವೈಎಸ್’ಆರ್ ಕಾಂಗ್ರೆಸ್ ಪಕ್ಷ ಇದು ರಾಜಕೀಯ ಪ್ರೇರಿತವಾದ ದುರುದ್ದೇಶದ ಆರೋಪವಾಗಿದೆ. ಇದರಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದಿದೆ.
ತಿರುಪತಿ ಲಾಡು ತಯಾರಿಕೆಯಲ್ಲಿ ತುಪ್ಪವನ್ನೇ ಬಳಸಲಾಗಿದ್ದು, ಯಾವುದೇ ರೀತಿಯ ಪ್ರಾಣಿಗಳ ಕೊಬ್ಬನ್ನು ಬಳಸಿಲ್ಲ ಎಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post