ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಒಣಗಲು ಹಾಕಿದ್ದ ಬಟ್ಟೆಗಳನ್ನು (Dry Colths) ತೆಗೆದುಕೊಳ್ಳಲು ಹೋದ ಮಹಿಳೆಯೊಬ್ಬರು ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ (Anekal) ಆನೇಕಲ್ ಪಟ್ಟಣದ ಸಿಪಾಯಿಗಲ್ಲಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಭುವನೇಶ್ವರಿ (49) ಎಂದು ಗುರುತಿಸಲಾಗಿದೆ.
ಬಟ್ಟೆ ತರಲು ಹೋದಾಗ ಸಂಭವಿಸಿದ ಅವಘಡ
ಭುವನೇಶ್ವರಿ ಅವರು ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸಂಜೆ ಮನೆಯ ಹೊರಭಾಗದಲ್ಲಿ ಒಣಗಲು ಹಾಕಿದ್ದ ಬಟ್ಟೆಗಳನ್ನು ತೆಗೆದುಕೊಳ್ಳಲು ಹೋದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ವೇಳೆ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದ ಭುವನೇಶ್ವರಿ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Also Read>> ತಾಳಗುಪ್ಪದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಮುಂದಾದ ವ್ಯಕ್ತಿಯ ರಕ್ಷಣೆ; 112 ಪೊಲೀಸರ ಮಾನವೀಯ ಕಾರ್ಯ
Anekal : ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಘಟನೆಯ ಬಳಿಕ ಮಹಿಳೆಯ ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಶವಗಾರದಲ್ಲಿ ಇರಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









