ಕಲ್ಪ ಮೀಡಿಯಾ ಹೌಸ್ | ತಿರುಮಲ |
ಹಿಂದೂಗಳ ಪವಿತ್ರ ಕ್ಷೇತ್ರ ತಿರುಪತಿ #Tirupati ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು #AnimalFat ಮಿಶ್ರಣ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ನಾಲ್ವರು ಪ್ರಮುಖರನ್ನು ಬಂಧಿಸಿದೆ.
ಬಂಧಿತ ಆರೋಪಿಗಳನ್ನು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಎಂದು ಗುರುತಿಸಲಾಗಿದೆ.
Also Read>> ಬೆಂಗಳೂರು | ಮೈಕೋ ವಿಪ್ರಸಭಾದಿಂದ NR ಕಾಲೋನಿಯಲ್ಲಿ ಗಾಯತ್ರಿ ಹೋಮ, ವಿದ್ಯಾರ್ಥಿ ವೇತನ ವಿತರಣೆ
ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್’ಎಸ್’ಎಸ್’ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ವರದಿಗಳಂತೆ ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮಗಳ ಉಲ್ಲಂಘನೆಯಾಗಿರುವುದು ಬಹಿರಂಗವಾಗಿದೆ. ಇದರಲ್ಲಿ ಟೆಂಡರ್ ಪಡೆಯಲು ನಕಲಿ ದಾಖಲೆಗಳು ಮತ್ತು ಸ್ಟಾö್ಯಂಪ್’ಗಳನ್ನು ಬಳಸಿರುವುದು ಕೂಡ ಸೇರಿಕೊಂಡಿದೆ.
ವೈಷ್ಣವಿ ಡೈರಿಯು ಭೋಲೆ ಬಾಬಾ ಡೈರಿಯ ತುಪ್ಪ ಪೂರೈಕೆಯ ನಿಯಮಗಳನ್ನು ತಿರುಚಿರುವುದು ಬೆಳಕಿಗೆ ಬಂದಿದೆ. ವಿಚಾರಣೆಯಲ್ಲಿ ಪೂರೈಕೆಯಲ್ಲಿ ಹಲವು ವ್ಯತ್ಯಾಸಗಳು ಮತ್ತು ಸುಳ್ಳು ದಾಖಲೆಗಳನ್ನು ನೀಡಿರುವುದು ಕಂಡುಬಂದಿವೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಎಸ್’ಐಟಿ ನಾಲ್ವರನ್ನು ಬಂಧಿಸಿತ್ತು. ಇವುಗಳಲ್ಲಿ ಎಆರ್ ಡೈರಿ, ಪರಾಗ್ ಫುಡ್ಸ್, ಪ್ರೀಮಿಯರ್ ಅಗ್ರಿ ಫುಡ್ಸ್ ಮತ್ತು ಆಲ್ಫಾ ಮಿಲ್ಕ್ ಫುಡ್ಸ್ ಸೇರಿವೆ. ಅಲ್ಲದೆ ವಿಶೇಷವಾಗಿ ತಿರುಮಲ ಲಡ್ಡು ವಿವಾದದ ಕುರಿತು ರಚಿಸಲಾದ ಎಸ್’ಐಟಿಯಲ್ಲಿ, ಸಿಬಿಐ ಜೆಸಿ ವೀರೇಶ್ ಪ್ರಭು ತಿರುಪತಿಯಲ್ಲಿಯೇ ಇದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post