ಕಲ್ಪ ಮೀಡಿಯಾ ಹೌಸ್ | ಅಂಕೋಲಾ |
ಅಂಕೋಲಾ ತಾಲ್ಲೂಕಿನ ಅಗಸೂರು ಗ್ರಾಮ ಪಂಚಾಯತ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮದಲ್ಲಿರುವ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ Padmashree Awardee Tulsi Gowda ಅವರ ಮನೆಗೆ ಹೋಗುವ ರಸ್ತೆಗೆ ಕಾಲುಸಂಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ್ MLA Rupali Naik ಮಾತನಾಡಿ, ನನ್ನ ಕ್ಷೇತ್ರದ ಹೆಮ್ಮೆಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಅವರ ಮನೆಗೆ ಸಂಪರ್ಕ ಕಲ್ಪಿಸುವ ಕಾಲುಸಂಕ ಹಾಗೂ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಧನೆಯನ್ನು ಪರಿಗಣಿಸಿ ಅಂಕೋಲಾ ತಾಲ್ಲೂಕಿನ ಇಬ್ಬರು ಸಾಧಕಿಯರಿಗೆ ಪದ್ಮಶ್ರೀ ಪುರಸ್ಕಾರವನ್ನು ನೀಡಿದ್ದಾರೆ. ಎಲ್ಲಾದರೂ ಕೂಡ ಪದ್ಮಶ್ರೀ ಪುರಸ್ಕೃತರ ಹೆಸರನ್ನು ಹೇಳಿದರೆ ಹೆಮ್ಮೆ ಎನ್ನಿಸುತ್ತದೆ ಎಂದರು.
ಸೇತುವೆ ನಿರ್ಮಾಣ ಮಾಡಬೇಕು ಎಂದು ಹಿಂದೆಯೇ ಹೇಳಿದ್ದೆ. ಮಳೆಗಾಲದಲ್ಲಿ ಮನೆಗೆ ಸಂಪರ್ಕ ಕಲ್ಪಿಸಲು ಮುತುವರ್ಜಿ ವಹಿಸಿ ತಾತ್ಕಾಲಿಕವಾಗಿ ಸೇತುವೆಯನ್ನು ನಿರ್ಮಿಸಲಾಗಿತ್ತು. ಇದು ಶಾಶ್ವತವಲ್ಲ. ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಇಲ್ಲಿರುವ ಜನರಿಗೆ ಈ ಕಾಮಗಾರಿಗಳು ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ತುಳಸಿ ಗೌಡ, ಅಂಕೋಲಾ ಅಧಿಕಾರಿಗಳು, ಮಂಡಲದ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಜನ ಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post