ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದಾದ್ಯಂತ ಮುಂಗಾರಿನ ಅಬ್ಬರ ಜೋರಾಗಿದ್ದು, ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಶಿವಮೊಗ್ಗದಲ್ಲಿ ಜೂನ್ 16ರಂದು ಭಾರೀ ಪ್ರಮಾಣದಲ್ಲಿ ವರ್ಷಧಾರೆ ಸುರಿಯುವ ಸಾಧ್ಯತೆಯಿದ್ದು, ಜೂನ್ 18ರವರೆಗೂ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ವರದಿಯಲ್ಲಿ ಯೆಲ್ಲೋ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ.
ಇನ್ನುಳಿದಂತೆ ಕರಾವಳಿ ಕರ್ನಾಟಕ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 20ರವರೆಗೂ ವರ್ಷಧಾರೆ ಸುರಿಯಲಿದ್ದು, ಜೂ.17ರವರೆಗೂ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ.
ಅಲ್ಲದೇ, ಚಿಕ್ಕಮಗಳೂರು, ಹಾಸನ ಹಾಗೂ ಕೊಡುಗು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗಲಿದ್ದು, ಜೂನ್ 18ರವರೆಗೂ ಮಳೆ ಮುಂದುವರೆಯಲಿದೆ.
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜೂನ್ 18ರವರೆಗೂ ಮಳೆಯಾಗಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post