ಪುರೋಲಿಯಾ(ಪಶ್ಚಿಮ ಬಂಗಾಳ): ಬಿಜೆಪಿ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯ ಬೆನ್ನಲ್ಲೇ ಇಂದು ಮುಂಜಾನೆ ಬಿಜೆಪಿಯ ಮತ್ತೊಬ್ಬ ಕಾರ್ಯಕರ್ತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.
ಪುರೋಲಿಯಾದಲ್ಲಿ ಹಾದುಹೋಗಿರುವ ಹೈಟೆನ್ಷಕ್ ಎಲೆಕ್ಟ್ರಿಕಲ್ ಬೃಹತ್ ಕಂಬದಲ್ಲಿ 30 ವರ್ಷದ ದಲಾಲ್ ಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಆದರೆ, ದಲಾಲ್ ಸಾವಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆತನ ತಾಯಿ, ತನ್ನ ಮಗ ಬಿಜೆಪಿಯನ್ನು ಈ ಮೊದಲು ಬೆಂಬಲಿಸುತ್ತಿದ್ದ. ಆದರೆ, ಇತ್ತೀಚೆಗೆ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದ ಎಂದಿರುವುದು ಗೊಂದಲಗಳಿಗೆ ಕಾರಣವಾಗಿದೆ.
ಕಳೆದ 8 ದಿನಗಳ ಹಿಂದಿನಿಂದ ದಲಾಲ್ ಕಾಣೆಯಾಗಿದ್ದನು ಎಂದು ಹೇಳಲಾಗಿದ್ದು, ಈ ಕುರಿತಂತೆ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರನ್ನೂ ಸಹ ದಾಖಲಿಸಿದ್ದರು ಎಂದು ವರದಿಯಾಗಿದೆ.
Discussion about this post